ಗುಡ್ಡೆಹೊಸೂರು: ಇಲ್ಲಿಗೆ ಸಮೀಪದ ಅತ್ತೂರಿನ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಪೋಷಣಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಮಹಿಳೆಯರು ಮತ್ತು ಮಕ್ಕಳು, ಗರ್ಭಿಣಿಯರು ಭಾಗವಹಿಸಿದ್ದರು. ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಎಸ್. ಭಾರತಿ ಉದ್ಘಾಟಿಸಿದರು. ವೇದಿಕೆಯಲ್ಲಿ ಪಿ.ಡಿ.ಓ. ಶ್ಯಾಂ ಮತ್ತು ಸದಸ್ಯ ಜಿ.ಟಿ. ರವಿ ಹಾಜರಿದ್ದರು. ಅಲ್ಲದೆ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ವಿಜಯಲಕ್ಷಿ, ಆರೋಗ್ಯ ಕಾರ್ಯಕರ್ತೆ ಶಾಂತ ಕುಮಾರಿ ಹಾಜರಿದ್ದು ಪ್ರಸ್ತಾವಿಕ ನುಡಿಯಾಡಿದರು. ಅಂಗನವಾಡಿ ಕಾರ್ಯಕರ್ತೆ ಜ್ಯೋತಿ, ಆಶಾ ಕಾರ್ಯಕರ್ತೆ ನಾಗರತ್ನ, ವೈಷ್ಣವಿ ಪ್ರಾರ್ಥಿಸಿದರು.ಪೊನ್ನಂಪೇಟೆ: ಟಿ. ಶೆಟ್ಟಿಗೇರಿ ವ್ಯಾಪ್ತಿಯ ವೆಸ್ಟ್ ನೆಮ್ಮಲೆ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಬಿರುನಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಪೋಷಣಾ ಅಭಿಯಾನವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭ ಗರ್ಭಿಣಿ ಹಾಗೂ ಬಾಣಂತಿಯರಿಗೆ ಮಗುವಿನ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಲಾಯಿತು. ಸೊಪ್ಪು, ತರಕಾರಿ, ಮೊಟ್ಟೆ ಮುಂತಾದ ಪೌಷ್ಟಿಕ ಆಹಾರಗಳನ್ನು ಸೇವಿಸಬೇಕು, ಕಾಯಿಸಿ ಆರಿಸಿದ ನೀರನ್ನು ಕುಡಿಯಲು ಬಳಸಬೇಕು, ಬಾಣಂತಿ ಹಾಗೂ ಗರ್ಭಿಣಿ ಸ್ತ್ರೀಯರು ತಂಬಾಕು ಹಾಗೂ ಮದ್ಯ ಸೇವನೆಯನ್ನು ಮಾಡಬಾರದು. ಸಮಸ್ಯೆ ಕಾಣಿಸಿಕೊಂಡರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಲಾಯಿತು.

ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆ ಟಿ.ಕೆ. ಯಶೋಧ, ಸಹಾಯಕಿ ಪಿ.ಎ. ಕೌಶಿ, ಆಶಾ ಕಾರ್ಯಕರ್ತೆ ಎಂ.ಡಿ. ಶೀಲ, ಎ.ವಿ. ಸುಕುಮಾರಿ, ಕೆ.ಎಸ್. ಕಾವೇರಮ್ಮ, ಕೆ.ಎನ್. ಕಾವೇರಮ್ಮ, ರೀಟಾ ಹಾಜರಿದ್ದರು.ಕೂಡಿಗೆ: ಪ್ರಾಥಮಿಕ ಆರೋಗ್ಯ ಕೇಂದ್ರದ ಉಪಕೇಂದ್ರದ ವತಿಯಿಂದ ಗೊಂದಿಬಸವನಹಳ್ಳಿ ಅಂಗನವಾಡಿಯಲ್ಲಿ ಆರೋಗ್ಯ ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಮುಖೇಶ ವಾಲಿಕಾರ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಕಾರ್ಯಕ್ರಮದಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ, ಕುಟುಂಬ ಕಲ್ಯಾಣ ವಿಧಾನಗಳ ಬಗ್ಗೆ ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ, ಸಾಂಕ್ರಾಮಿಕ ರೋಗಗಳ ಬಗ್ಗೆ, ಸಾಂಕ್ರಾಮಿಕವಲ್ಲದ ರೋಗಗಳ ಬಗ್ಗೆ, 104 ಸಹಾಯವಾಣಿ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಈ ಸಂದರ್ಭ ಅಂಗನವಾಡಿಕೇಂದ್ರ ಕಾರ್ಯಕರ್ತೆ ಹಾಗೂ ಸಹಾಯಕಿ, ಆಶಾ ಕಾರ್ಯಕರ್ತೆ ಹಾಗೂ ಆ ವ್ಯಾಪ್ತಿಯ ಗರ್ಭೀಣಿಯರು ಮತ್ತು ಬಾಣಂತಿಯರು ಇದ್ದರು.ಗೋಣಿಕೊಪ್ಪಲು: ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಹಯೋಗದೊಂದಿಗೆ ಪ್ರಧಾನ ಮಂತ್ರಿ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಸಂದರ್ಭ ಪೌಷ್ಟಿಕ ಆಹಾರ, ಸೀಮಂತ ಕಾರ್ಯಕ್ರಮ ಹಾಗೂ ಅನ್ನಪ್ರಾಶನ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ತಾ.ಪಂ. ಸದಸ್ಯೆ ಆಶಾ ಜೇಮ್ಸ್, ಗ್ರಾ.ಪಂ. ಸದಸ್ಯ ಅನೂಪ್ ಕುಮಾರ್, ವಿಜಯ, ಡಾ. ಹೊಸಮನಿ, ಮಹಿಳಾ ಮತ್ತು ಮಕ್ಕಳ ಇಲಾಖಾ ಸಿ.ಡಿ.ಪಿ.ಓ., ಮುಖ್ಯೋಪಾಧ್ಯಾಯ ಬೊಮ್ಮಲಿಂಗಯ್ಯ, ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.ಕೂಡಿಗೆ: ಪ್ರಾಥಮಿಕ ಆರೋಗ್ಯ ಕೇಂದ್ರ ಕೂಡಿಗೆ ಇವರ ವತಿಯಿಂದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನತಾ ಕಾಲೋನಿಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ ನಡೆಯಿತು. ಉದ್ಘಾಟನೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷ ಅಂಬಿಕಾ ನೆರವೇರಿಸಿದರು. ಈ ಯೋಜನೆ ಸದುಪಯೋಗ ಬಗ್ಗೆ ಸವಿಸ್ತಾರವಾಗಿ ಮಹಿಳೆಯರಿಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಯಿಷಾ ಮಹಿಳೆಯರು ಸರಕಾರ ಯೋಜನೆಯನ್ನು ಬಳಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮುತ್ತಪ್ಪ ಸೇರಿದಂತೆ ಅಂಗನವಾಡಿ ಕಾರ್ಯಕತೆಯರು ಗ್ರಾಮದ ಮಹಿಳೆಯರು ಭಾಗವಹಿಸಿದ್ದರು.