ಮಡಿಕೇರಿ, ಸೆ. 23: ಸ್ಥಳೀಯವಾಗಿ ಸಿಗುವಂತಹ ಉತ್ತಮ ಪೌಷ್ಟಿಕ ಆಹಾರ ಬಳಸುವದರಿಂದ ಅಪೌಷ್ಟಿಕತೆಯನ್ನು ನಿವಾರಣೆ ಮಾಡಲು ಸಹಕಾರಿಯಾಗಲಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕಾರ್ಯಪ್ಪ ತಿಳಿಸಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ ದಡಿ ನಗರದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ನಡೆದ ರಾಷ್ಟ್ರೀಯ ಪೌಷ್ಟಿಕ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಕೃತಿಕ ಹಾಗೂ ಸ್ಥಳೀಯವಾಗಿ ದೊರೆಯುವಂತಹ ಆಹಾರ ಹೆಚ್ಚು ಬಳಸುವದರೊಂದಿಗೆ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಸುವದರೊಂದಿಗೆ ಅಪೌಷ್ಟಿಕತೆ ನಿವಾರಣೆಯಾಗಲು ಸಹಕಾರಿಯಾಗಿದೆ ಎಂದು ಅವರು ನುಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಲೋಕೇಶ್ ಅವರು ಮಾತನಾಡಿ ತಾಯಂದಿರ ಮತ್ತು ಮಕ್ಕಳ ಉತ್ತಮ ಆರೋಗ್ಯದಿಂದ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಆದ್ದರಿಂದ ಪೌಷ್ಟಿಕ ಆಹಾರ ವನ್ನು ಪ್ರತಿನಿತ್ಯ ಬಳಸುವದರಿಂದ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆ ಯಾಗುತ್ತದೆ. ಇದರಿಂದ ಉತ್ತಮ ಆರೋಗ್ಯ ಪಡೆಯಲು ಸಹಕಾರಿಯಾU Àಲಿದೆ ಎಂದು ಅವರು ತಿಳಿಸಿದರು.
ಸ್ತ್ರೀರೋಗ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಕೀಯ ಶಾಸ್ತ್ರದ ಮುಖ್ಯಸ್ಥ ಡಾ.ರಾಮಚಂದ್ರ ಕಾಮತ್, ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಪುರುಷೋತ್ತಮ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತಾಧಿಕಾರಿ ಮೇರಿ ನಾಣಯ್ಯ ಮತ್ತು ವೈದ್ಯರುಗಳು, ವೈದ್ಯಕೀಯ ವಿದ್ಯಾರ್ಥಿಗಳು ಇತರರು ಇದ್ದರು. ಮಕ್ಕಳ ವಿಭಾಗದ ಡಾ.ವೀರೇಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಡಾ. ಅಚ್ಚುತ ಅವರು ಸ್ವಾಗತಿಸಿದರು.