ನಾಪೋಕ್ಲು: ಶಾಲಾ ವಿದ್ಯಾರ್ಥಿ ಸಂಘಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ತಮ್ಮ ಕರ್ತವ್ಯಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಹೇಳಿದರು. ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷ ಚೇನಂಡ ಗಿರೀಶ್ ಪೂಣಚ್ಚ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು.

ತಾಲೂಕು ಪಂಚಾಯಿತಿ ಸದಸ್ಯೆ ಉಮಾಪ್ರಭು ಮಾತನಾಡಿ, ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಮುಖ್ಯ ಶಿಕ್ಷಕ ಮನೋಹರ್ ನಾಯಕ್ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.ಶನಿವಾರಸಂತೆ: ವಿದ್ಯಾರ್ಥಿಗಳ ಬಹುಮುಖ ಪ್ರತಿಭೆ ಅನಾವರಣಗೊಳ್ಳಲು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉತ್ತಮ ವೇದಿಕೆ ಎಂದು ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಲೋಕೇಶ್ ಅಭಿಪ್ರಾಯಪಟ್ಟರು. ಸಮೀಪದ ಆಲೂರು-ಸಿದ್ದಾಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಗೋಣಿಮರೂರು ಕ್ಲಸ್ಟರ್ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ರತ್ನಾಕರ್ ಮಾತನಾಡಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲೆ ಕೆ.ಎನ್. ಭಾರತಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ರಾಜಪ್ಪ, ಸಂಪನ್ಮೂಲ ವ್ಯಕ್ತಿ ಚಿನ್ನಪ್ಪ, ಮುಖ್ಯ ಶಿಕ್ಷಕಿ ತಂಗಮ್ಮ, ಶಿಕ್ಷಕರಾದ ಡಿ.ಪಿ. ಸತೀಶ್, ಮೂರ್ತಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಲೀಲಾದೇವದಾಸ್, ಎಂ.ಎನ್. ಮಲ್ಲೇಶ್ ಉಪಸ್ಥಿತರಿದ್ದರು.ಸೋಮವಾರಪೇಟೆ: ಆಂತರಿಕ ಗುಣಮಟ್ಟ ಖಾತ್ರಿಕೋಶ ಅಡಿಯಲ್ಲಿ ರ್ಯಾಗಿಂಗ್, ಡ್ರಗ್ಸ್, ಆತ್ಮಹತ್ಯೆ, ಲೈಂಗಿಕ ದೌರ್ಜನ್ಯ ತಡೆಗಟ್ಟುವ ಬಗ್ಗೆ ಅಂತರ ಕಾಲೇಜುಗಳ ಒಂದು ದಿನದ ಕಾರ್ಯಾಗಾರ ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ವೃತ್ತ ನಿರೀಕ್ಷಕರಾದ ನಂಜುಂಡೇಗೌಡ ಉದ್ಘಾಟಿಸಿದರು. ಜಿಲ್ಲಾ ಮಾನಸಿಕ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆಯ ಮನೋಶಾಸ್ತ್ರಜ್ಞರಾದ ಡಾ. ಡೆವಿನ್ ಆತ್ಮಹತ್ಯೆಗೆ ಕಾರಣಗಳು, ಅಂತಹ ಯೋಚನೆಗಳಿಂದ ಹೊರಬರುವ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಯಡೂರು ಬಿ.ಟಿ.ಸಿ.ಜಿ. ಕಾಲೇಜಿನ ಪ್ರಾಂಶುಪಾಲ ಶ್ರೀಧರ್, ಸಂತ ಜೋಸೆಫರ ವಿದ್ಯಾಸಂಸ್ಥೆಗಳ ಸಂಚಾಲಕ ಫಾದರ್ ಎಂ. ರಾಯಪ್ಪ, ಪದವಿ ಕಾಲೇಜಿನ ಪ್ರಾಂಶುಪಾಲ ಅಂತೋಣಿ ರಾಜ್ ಇದ್ದರು. ಬಿ.ಟಿ.ಸಿ.ಜಿ. ಪ್ರಥಮ ದರ್ಜೆ ಕಾಲೇಜು, ಶನಿವಾರಸಂತೆ ಭಾರತೀ ವಿದ್ಯಾಸಂಸ್ಥೆ, ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜಿನ ಒಟ್ಟು 134 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.ನಾಪೆÇೀಕ್ಲು: ಎಮ್ಮೆಮಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ ಮತ್ತು ಬಾಲಕಿಯರು ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾರದ ಗುಂಡು ಎಸೆತದಲ್ಲಿ ಪ್ರಥಮ, ಚಕ್ರ ಎಸೆತದಲ್ಲಿ ಮತ್ತು ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.ಒಡೆಯನಪುರ: ರೋಟರಿ ಸಂಸ್ಥೆಯು ಜಾತಿ, ಧರ್ಮ ಭಾಷೆಯನ್ನು ಮೀರಿದ ಅಂತರರಾಷ್ಟ್ರೀಯ ಮಟ್ಟದ ಸಮಾಜ ಸೇವಾ ಸಂಸ್ಥೆಯಾಗಿದೆ ಎಂದು ಜಿಲ್ಲಾ ರೋಟರಿ ಸಂಸ್ಥೆಯ ಸಹಾಯಕ ಗವರ್ನರ್ ಪಿ.ಹೆಚ್.ಎಫ್. ನಾಗೇಶ್ ಅಭಿಪ್ರಾಯಪಟ್ಟರು. ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ಗುಡುಗಳಲೆ ಆರ್.ವಿ. ಕಲ್ಯಾಣ ಮಂಟಪದಲ್ಲಿ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೆಚ್.ಎಸ್. ವಸಂತ್‍ಕುಮಾರ್ ಮಾತನಾಡಿ, ರೋಟರಿ ಸಂಸ್ಥೆಯು ಸಮಾಜ ಸೇವೆ ಮೂಲಕ ದೇಶ-ವಿದೇಶದಲ್ಲಿ ಪ್ರಖ್ಯಾತಿ ಪಡೆದುಕೊಂಡಿದೆ ಎಂದರು. ಗೋಪಾಲಪುರ ಸಂತ ಅಂಥೋಣಿ ಚರ್ಚ್‍ನ ಫಾದರ್ ಜೇಕಬ್ ಕೋ¯ನ್ನೂರ್ ಮಾತನಾಡಿದರು. ಈ ಸಂದರ್ಭ ನಿಡ್ತ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ರೋಜಿ ಹಾಗೂ ಅಂಕನಹಳ್ಳಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಜಿ.ಎಂ. ಹೇಮಂತ್ ಅವರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ಎಸ್.ವಿ. ಶುಭು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ಹೆಚ್.ಬಿ. ಚಂದನ್, ನಿಕಟಪೂರ್ವ ಕಾರ್ಯದರ್ಶಿ ಎ.ಡಿ. ಮೋಹನ್‍ಕುಮಾರ್, ನಿಕಟಪೂರ್ವ ಅಧ್ಯಕ್ಷ ಟಿ.ಆರ್. ಪುರುಷೋತಮ್, ರೋಟರಿ ಪ್ರಮುಖರಾದ ಹೆಚ್.ವಿ. ದಿವಾಕರ್, ಡಿ. ಅರವಿಂದ್ ರವಿ, ಕೆ.ಎಂ. ವಿನೂತ್ ಶಂಕರ್, ಬೀನಾ ಅರವಿಂದ್, ಶ್ವೇತ ವಸಂತ್, ಮೋಹನ್, ವನಿತ, ಸಂದೀಪ್ ಮುಂತಾದವರು ಹಾಜರಿದ್ದರು. ಈ ಸಂದರ್ಭ ವಿದ್ಯಾರ್ಥಿನಿಯರಿಂದ ನೃತ್ಯ ಕಾರ್ಯಕ್ರಮ ನಡೆಯಿತು.