ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ವೈದ್ಯಕೀಯ ವಿದ್ಯಾರ್ಥಿಗಳಿಗೆ ರ್ಯಾಗಿಂಗ್ ತಡೆಗಟ್ಟುವ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಗರದ ವೈದ್ಯಕೀಯ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ ಪೆನ್ನೇಕರ್ ಅವರು ರ್ಯಾಗಿಂಗ್ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಸುಪ್ರೀಂ ಕೋರ್ಟ್ ಆದೇಶದನ್ವಯ ರ್ಯಾಗಿಂಗ್ ತಡೆಗಟ್ಟುವ ಬಗ್ಗೆ ಜಾಗೃತಿ ಮಾಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು. ನೂತನವಾಗಿ ಆಗಮಿಸುವ ಕಿರಿಯ ವೈದ್ಯ ವಿದ್ಯಾರ್ಥಿಗಳಿಗೆ ಸ್ವಾಗತಿಸುವ ಕಾರ್ಯಕ್ರಮ ಸಂಘಟಿಸಿ ಕಾಲೇಜಿನ ವಾತಾವರಣದಲ್ಲಿ ಹಿರಿಯರು ಮತ್ತು ಕಿರಿಯರು ಒಟ್ಟಾಗಿ ಬೆರೆಯುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ. ಕಾರ್ಯಪ್ಪ ಕೆ.ಬಿ. ಮಾತನಾಡಿದರು. ಸಂಸ್ಥೆಯ ರ್ಯಾಗಿಂಗ್ ವಿರೋಧಿ ಸಮಿತಿಯ ಸಮನ್ವಯಾಧಿಕಾರಿಗಳಾದ ಡಾ. ಉಮೇಶ್ ಬಾಬು ಪ್ರತಿಜ್ಞಾ ವಿಧಿ ಭೋದಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರ್ಯಾಗಿಂಗ್ ಕೃತ್ಯ ಮತ್ತು ಅದರ ಪರಿಣಾಮಗಳ ಬಗ್ಗೆ ಕಿರುನಾಟಕ ಪ್ರದರ್ಶಿಸಿದರು. ನಂತರ ಕಾಲೇಜು ಆವರಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಗಿಡ ನೆಟ್ಟರು.
ಸಂಸ್ಥೆಯ ಪ್ರಾಂಶುಪಾಲ ಡಾ. ವಿಶಾಲ್‍ಕುಮಾರ್, ವೈದ್ಯಕೀಯ ಅಧೀಕ್ಷಕ ಡಾ. ಲೋಕೇಶ್ ಎ.ಜೆ., ಮುಖ್ಯ ಆಡಳಿತಾಧಿಕಾರಿ ಮೇರಿ ನಾಣಯ್ಯ, ಸ್ಥಾನೀಯ ವೈದ್ಯಾಧಿಕಾರಿ ಡಾ. ಮಂಜುನಾಥ ಎಸ್., ನ್ಯಾಯ ವೈದ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಉಮೇಶ್ ಬಾಬು ಸೇರಿದಂತೆ ಬೋಧಕ ವರ್ಗದವರು ಮತ್ತು ಎಂಬಿಬಿಎಸ್ ವಿದ್ಯಾರ್ಥಿ ಗಳು ಹಾಜರಿದ್ದರು.ಗೋಣಿಕೊಪ್ಪಲು: ಇತ್ತೀಚೆಗೆ ಕಾವೇರಿ ಕಾಲೇಜು, ಗೋಣಿಕೊಪ್ಪಲು ಇಲ್ಲಿ ಕಾವೇರಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಪುಚ್ಚಿಮಾಡ ದಿ. ತಿಮ್ಮಯ್ಯ, ಚೋಂದಮ್ಮ ಮತ್ತು ಮೀನ ಸುಬ್ಬಯ್ಯ ಜ್ಞಾಪಕಾರ್ಥ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಕಾವೇರಿ ಪದವಿಪೂರ್ವ ಕಾಲೇಜಿನಿಂದ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಜಯಸೂರ್ಯ ಎಸ್. ಮತ್ತು ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಸುಂಧರ ಭಾರ್ಗವ್ ಐ. ಭಾಗವಹಿಸಿದ್ದರು. ಜಯಸೂರ್ಯ ಎಸ್. ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾಳೆ. ಈ ವಿದ್ಯಾರ್ಥಿಗಳಿಗೆ ಉಪನ್ಯಾಸಕಿ ಎಂ.ಬಿ. ಪೂವಮ್ಮ ಮತ್ತು ಆಡಳಿತ ಸಿಬ್ಬಂದಿ ಚೆನ್ನನಾಯಕ ಎಂ.ಎಂ. ಅವರುಗಳು ತರಬೇತಿ ನೀಡಿದ್ದರು.ಕೂಡಿಗೆ : ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟವು ಅ.10 ರಂದು ಕೂಡಿಗೆಯಲ್ಲಿ ನಡೆಯಲಿದ್ದು, ಈ ಹಿನ್ನಲೆ ಪೂರ್ವಭಾವಿ ಸಭೆಯು ಕೂಡಿಗೆ ಡಯಟ್ ಸಭಾಂಗಣದಲ್ಲಿ ನಡೆಯಿತು.
ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಯ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಕ್ರೀಡೆಯಲ್ಲಿ ಪಾಲ್ಗೊಳ್ಳುವವರಿಗೆ ವಸತಿ ಮತ್ತು ಊಟದ ವ್ಯವಸ್ಥೆ ಹಾಗೂ ಇನ್ನಿತರ ಸೌಲಭ್ಯಗಳನ್ನು ಏರ್ಪಡಿಸುವದರ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
ಆಟದ ಮೈದಾನದ ಸಿದ್ಧತೆ, ತೀರ್ಪುಗಾರರುಗಳ ಆಯ್ಕೆ, ವಿವಿಧ ಸಮಿತಿಗಳ ರಚನೆಗೆ ಸಂಬಂಧಪಟ್ಟಂತೆ ಆಯಾ ವಲಯಗಳ ದೈಹಿಕ ಶಿಕ್ಷಕರುಗಳಿಗೆ ಜವಾಬ್ದಾರಿ ವಹಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಯಟ್‍ನ ಪ್ರಭಾರ ಪ್ರಾಂಶುಪಾಲ ಸಿದ್ಧರಾಜು ವಹಿಸಿದ್ದರು.
ಈ ಸಂದರ್ಭ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜಯ್ಯ, ಡಯಟ್‍ನ ಹಿರಿಯ ಉಪನ್ಯಾಸಕ ಮಲ್ಲಯ್ಯ ಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕ ವೆಂಕಟೇಶ್, ಮೊರಾರ್ಜಿ ಶಾಲೆಯ ಪ್ರಾಂಶುಪಾಲ ಪ್ರಕಾಶ್ ಸೇರಿದಂತೆ ಜಿಲ್ಲೆಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರು, ದೈಹಿಕ ಉಪನ್ಯಾಸಕರ ಸಂಘ ಹಾಗೂ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಯ ದೈಹಿಕ ಶಿಕ್ಷಕರು ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಿದರು.
ನಂತರ ಕ್ರೀಡಾಕೂಟಕ್ಕೆ ಸಂಬಂಧಪಟ್ಟಂತೆ ಸಮಿತಿಗಳ ರಚನೆ ನಡೆದವು. ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಡಾ. ಸದಾಶಿವಯ್ಯ ಎಸ್. ಪಲ್ಲೇದ್ ಸ್ವಾಗತಿಸಿ ವಂದಿಸಿದರು. ಕೂಡಿಗೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೂಡಿಗೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ಡಾ. ಬಿ.ಆರ್. ಅಂಬೇಡ್ಕರ್ ಪುಸ್ತಕ ಓದು’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಉದ್ಘಾಟನೆಯನ್ನು ನೆರೆವೇರಿಸಿದ ಕೂಡಿಗೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹಲಿಂಗಯ್ಯ ಮಾತನಾಡುತ್ತಾ, ಸಮಗ್ರ ಸಂವಿಧಾನದ ರಚನೆ ಮಾಡುವದರ ಮೂಲಕ ಸಮಾಜಕ್ಕೆ ಸಮಾನತೆ ಸಾರಿದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರದಾರೆಗಳು ಇಂದು ಪ್ರಸ್ತುತವಾಗಿದ್ದು, ವಿದ್ಯಾರ್ಥಿ ಜೀವನದಲ್ಲಿ ಅವರ ಪುಸ್ತಕಗಳನ್ನು ಓದುವದರ ಮೂಲಕ ಸಮಾಜಕ್ಕೆ ತಿಳಿಸುವಂತಾಗಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್ ಮಾತನಾಡಿ, ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟ ಡಾ. ಬಿ.ಆರ್. ಅಂಬೇಡ್ಕರ್ ಅವರು ಮಾನವನ ಹಿತ ಕಾಯಲು ಮಾಡಿದ ಸಾಧನೆಯನ್ನು ನೆನಪಿಸಬೇಕಾದರೆ ಅವರ ಪುಸ್ತಕಗಳನ್ನು ಓದಬೇಕು ಎಂದರು.
ವೇದಿಕೆಯಲ್ಲಿ ಉಪನ್ಯಾಸಕರುಗಳಾದ ನಾಗಪ್ಪಯಾಲಕ್ಕಿಕಟ್ಟೆ, ಹೇಮ್‍ರಾಜ್, ಸತೀಶ್, ಪಾವನ, ರಮೇಶ್, ಲೆಸೆಟ್, ಪಲ್ಲವಿ, ಸೂಸಿ ತಂಗಚ್ಚನ್ ಇದ್ದರು.
ಕಾರ್ಯಕ್ರಮದ ಅಂಗವಾಗಿ ಗೀತಗಾಯನ ಏರ್ಪಡಿಸಲಾಗಿತ್ತು. ಕೋಮಲ ಸ್ವಾಗತಿಸಿ, ಸವಿತಾ ನಿರೂಪಿಸಿ, ವರುಣಾ ವಂದಿಸಿದರು.ಸೋಮವಾರಪೇಟೆ : ಪೌಷ್ಠಿಕಾಂಶಯುಕ್ತ ಆಹಾರ ಸೇವನೆ ಭವಿಷ್ಯದ ಆರೋಗ್ಯ ಪೂರ್ಣ ಜೀವನಕ್ಕೆ ಭದ್ರ ತಳಪಾಯವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್. ದಿಂಡಲಕೊಪ್ಪ ಅಭಿಪ್ರಾಯಿಸಿದರು.
ಪಟ್ಟಣದ ವೆಂಕಟೇಶ್ವರ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿಯೊಬ್ಬ ಮನುಷ್ಯನ ಆರೋಗ್ಯ ಅತ್ಯಮೂಲ್ಯವಾಗಿದೆ. ಆರೋಗ್ಯವಂತ ಕುಟುಂಬಗಳಿಂದ ಮಾತ್ರ ರಾಷ್ಟ್ರಾಭಿವೃದ್ಧಿ ಸಾಧ್ಯ. ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಪೌಷ್ಠಿಕಾಂಶಯುಕ್ತ ಆಹಾರ ಸೇವನೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಹೆಚ್ಚು ಹೆಚ್ಚು ಆಯೋಜಿಸಬೇಕಿದೆ ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಪ್ರಧಾನ ಸಿವಿಲ್ ನ್ಯಾಯಧೀಶರಾದ ಪ್ರತಿಭಾ ಅವರು ಮಾತನಾಡಿ, ನಿಸರ್ಗದಿಂದ ಸಿಗುವ ಪೌಷ್ಠಿಕಾಂಶ ಆಹಾರವನ್ನು ಸೇವಿಸಿದರೆ ಔಷಧಿ-ಚಿಕಿತ್ಸೆಗಳಿಂದ ದೂರ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪೌಷ್ಠಿಕತೆಯಿಂದ ಕೂಡಿದ ತಾಜಾ ತರಕಾರಿ, ಹಣ್ಣು-ಹಂಪಲುಗಳನ್ನು ಸೇವಿಸಿ, ಆರೋಗ್ಯವಂತ ಕುಟುಂಬವನ್ನು ಕಟ್ಟಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಡಿ.ಕೆ. ತಿಮ್ಮಯ್ಯ ವಹಿಸಿದ್ದರು. ವಕೀಲರಾದ ಎಚ್.ಆರ್. ಪವಿತ್ರರವರು ಪೌಷ್ಠಿಕ ಆಹಾರದ ಬಗ್ಗೆ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ಉಪಸ್ಥಿತರಿದ್ದರು. ಪಟ್ಟಣ ಪಂಚಾಯಿತಿ ಸದಸ್ಯರುಗಳು, ಅಂಗನವಾಡಿ, ಆರೋಗ್ಯ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಮಕ್ಕಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಂಗನವಾಡಿ ಕಾರ್ಯಕರ್ತೆ ತಾರಾ ಲೋಬೋ ಕಾರ್ಯಕ್ರಮ ನಿರ್ವಹಿಸಿದರು.ನಾಪೆÇೀಕ್ಲು, ಸೆ. 22: ಸಮೀಪದ ಚೆರಿಯಪರಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಡ್ ಸಂಸ್ಥೆಯ ಕೊಡಗು ಮಕ್ಕಳ ಸಹಾಯವಾಣಿಯ ವತಿಯಿಂದ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತೆರೆದ ಮನೆ ಕಾರ್ಯಕ್ರಮವನ್ನು ನಡೆಸಲಾಯಿತು.
ಮಕ್ಕಳ ಹಕ್ಕುಗಳು, ಬಾಲ್ಯವಿವಾಹ ನಿಷೇಧ, ಬಾಲಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲ ನ್ಯಾಯ ಮಂಡಳಿಯ ಬಗ್ಗೆ ಪೆÇೀಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಹಾಯವಾಣಿ ತಂಡದ ಸದಸ್ಯರಾದ ವಿ.ಎನ್. ಶೋಭಲಕ್ಷ್ಮಿ, ಎ.ಜೆ. ಮಂಜುಳ, ಪ್ರವೀಣ್ ಕುಮಾರ್, ಯೋಗೇಶ್, ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಅಬ್ದುಲ್ ಕರೀಂ, ಸದಸ್ಯರು, ಶಿಕ್ಷಕರು, ನಾಪೆÇೀಕ್ಲು ಪೆÇಲೀಸ್ ಠಾಣಾ ಸಿಬ್ಬಂದಿಗಳು ಇದ್ದರು.
ಮುಖ್ಯ ಶಿಕ್ಷಕಿ ಪಿ.ಕೆ. ಪಾರ್ವತಿ ಸ್ವಾಗತ, ಸಹಶಿಕ್ಷಕ ಸುಕುಮಾರ್ ನಿರೂಪಿಸಿ, ಶಿಕ್ಷಕಿ ಮಂಜುಳ ವಂದಿಸಿದರು.ಮಡಿಕೇರಿ : ಮಡಿಕೇರಿ ರೋಟರಿ ಕ್ಲಬ್ ವತಿಯಿಂದ ನಗರದ ಸರ್ಕಾರಿ ಪ್ರೌಢಶಾಲೆಗೆ ರೋಟರಿ ಕಿಟ್ ವಿತರಿಸಲಾಯಿತು.
ಶಾಲೆಯ 160 ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಪಠ್ಯ ಮತ್ತು ಪಠ್ಯೇತರ ಸಂಬಂಧಿತ ಪುಸ್ತಕಗಳುಳ್ಳ ಕಿಟ್‍ನ್ನು ರೋಟರಿ ಮಡಿಕೇರಿಯ ಅಧ್ಯಕ್ಷ ಕೆ.ಎಸ್. ರತನ್ ತಮ್ಮಯ್ಯ ವಿತರಿಸಿದರು. ಕಾರ್ಯದರ್ಶಿ ಕೆ.ಸಿ. ಕಾರ್ಯಪ್ಪ, ಮಾಜಿ ಅಧ್ಯಕ್ಷ ಎಂ.ಎಂ. ಕಾರ್ಯಪ್ಪ, ನಿರ್ದೇಶಕ ಅನಿಲ್ ಕೃಷ್ಣಾನಿ ಹಾಜರಿದ್ದರು.ಸುಂಟಿಕೊಪ್ಪ : ಸುಂಟಿಕೊಪ್ಪ ಮಲಯಾಳಿ ಸಮಾಜದ ವತಿಯಿಂದ 12ನೇ ವರ್ಷದ ಓಣಂ ಆಚರಣೆ ಪ್ರಯುಕ್ತ ಸಮಾಜ ಬಾಂಧವರ ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟವನ್ನು ಏರ್ಪಡಿಸಲಾಯಿತು. ಇಲ್ಲಿನ ಜಿಎಂಪಿ ಶಾಲಾ ಮೈದಾನದಲ್ಲಿ ಆಟೋಟ ಸ್ಪರ್ಧೆಗೆ ಮಲಯಾಳಿ ಸಮಾಜದ ಮಾಜಿ ಅಧ್ಯಕ್ಷ ಪಿ.ಸಿ.ಮೋಹನ್ ಚಾಲನೆ ನೀಡಿದರು. ಮೋಟಾರ್ ಬೈಕ್ ಹಾಗೂ ಸೈಕಲ್ ನಿಧಾನ ಚಾಲನೆ ಸ್ಪರ್ಧೆ,ಯುಕೆಜಿ ಎಲ್‍ಕೆಜಿ ಅಂಗನವಾಡಿ ಮಕ್ಕಳಿಗೆ ಕಡ್ಲೆಕಾಳು ಹೆಕ್ಕುವ ಸ್ಪರ್ಧೆ, 1 ರಿಂದ 2ನೇ ತರಗತಿ ವಿದ್ಯಾರ್ಥಿಗಳಿಗೆ ಕಪ್ಪೆ ಜಿಗಿತ, 2 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಒಂಟಿ ಕಾಲು ಓಟದ ಸ್ಪರ್ಧೆ, 3-4ನೇ ತರಗತಿ ಬಾಲಕ ಬಾಲಕಿಯರಿಗೆ ಓಟದ ಸ್ಪರ್ಧೆ, 6-7 ಹಾಗೂ 8ನೇ ತರಗತಿಯ ಬಾಲಕ-ಬಾಲಕಿಯರಿಗೆ ಓಟದ ಸ್ಪರ್ಧೆ, ಕಾಲೇಜು ವಿದ್ಯಾರ್ಥಿಗಳಿಗೆ ಓಟದ ಸ್ಪರ್ಧೆ ಮತ್ತಿತರ ಸ್ಪರ್ಧೆಗಳು ನಡೆದವು.ಸುಂಟಿಕೊಪ್ಪ, ಸೆ. 22: ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ತೆರಳಿ ಮತದಾನದ ಬಗ್ಗೆ ಜಾಗೃತಿ ಜಾಥಾವನ್ನು ನಡೆಸಲಾಯಿತು.
‘ಮನೆಯಲ್ಲಿ ಕೂರದೆ ಮತದಾನ ಹಕ್ಕು ಚಲಾಯಿಸಿ’ ಮತದಾನ ಮಾಡಿ ಪ್ರಜಾಪ್ರಭುತ್ವ ಉಳಿಸಿ ಎಂಬ ಘೋಷಣೆಗಳನ್ನು ಕೂಗಿ ಜಾಥಾದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಶನಿವಾರಸಂತೆ : ದೈಹಿಕ ಸಾಮಥ್ರ್ಯ ಸದೃಢವಾಗಲು ಹಾಗೂ ವಿಶಾಲ ಮನೋಭಾವ ಮೂಡಲು ಕ್ರೀಡೆ ಸಹಕಾರಿಯಾಗುತ್ತದೆ. ಕ್ರೀಡೆಯಿಂದ ಶಾರೀರಿಕವಾಗಿ ಮತ್ತು ಮಾನಸಿಕವಾಗಿ ಸದೃಢತೆಯನ್ನು ಸಾಧಿಸಬಹುದು ಎಂದು ಸ್ಥಳೀಯ ಪೊಲೀಸ್ ಠಾಣೆಯ ಎ.ಎಸ್.ಐ. ಗೋವಿಂದ್ ಅಭಿಪ್ರಾಯಪಟ್ಟರು.
ಪಟ್ಟಣದ ವಿಘ್ನೇಶ್ವರ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ತಾಲೂಕು ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕಬಡ್ಡಿ ಕ್ರೀಡಾಕೂಟ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ ದರು. ಸೋಮವಾರಪೇಟೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಚೆನ್ನಕೇಶವ ಮೂರ್ತಿ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವಿಕೆ ಮುಖ್ಯವಾಗಿರುತ್ತ ದೆಯೆ ವಿನಃ ಸೋಲು-ಗೆಲವನ್ನು ಕ್ರೀಡಾಪಟು ಸಮಾನವಾಗಿ ಪರಿಗಣಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಕೆ. ಸುಬ್ರಮಣ್ಯ ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಮೂಡಿಸುತ್ತದೆ. ಸೋಲು-ಗೆಲವನ್ನು ಸಮಾನ ಮನಸ್ಥಿತಿಯಿಂದ ಸ್ವೀಕರಿಸಬೇಕು ಎಂದರು. ವಿದ್ಯಾ ಸಂಸ್ಥೆ ಕಾರ್ಯದರ್ಶಿ ಸಿ.ಎಸ್. ಬೆಳ್ಳಿಯಪ್ಪ, ಉಪಾಧ್ಯಕ್ಷ ಕೆ.ಈ. ಕೃಷ್ಣರಾಜ್, ನಿರ್ದೇಶಕಿ ಡಿ.ಜಿ. ನಿತ್ಯಾನಿಧಿ, ಪ್ರಾಂಶುಪಾಲ ಟಿ.ಪಿ. ಶಿವಪ್ರಕಾಶ್, ಉಪನ್ಯಾಸಕ ವಿ.ಎಂ. ಮೊಹಮ್ಮದ್ ಜಹೀರ್, ವಿವಿಧ ವಿದ್ಯಾ ಸಂಸ್ಥೆಗಳ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ್‍ಕುಮಾರ್, ಕೃಷ್ಣ, ಶಿವಣ್ಣ, ಮುತ್ತಪ್ಪ, ರಂಗಸ್ವಾಮಿ, ಗಿರೀಶ್, ಶ್ರೀಕಲಾ ಉಪಸ್ಥಿತರಿದ್ದರು. ಕ್ರೀಡಾಕೂಟದಲ್ಲಿ 19 ಕಾಲೇಜುಗಳ ಬಾಲಕರ ತಂಡ ಹಾಗೂ 6 ಕಾಲೇಜು ಗಳ ಬಾಲಕಿಯರ ತಂಡ ಪಾಲ್ಗೊಂಡಿದ್ದವು.ಗೋಣಿಕೊಪ್ಪ ವರದಿ : ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಅರಣ್ಯ ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಡಾ. ಜಿ. ಎಂ. ದೇವಗಿರಿ ಪಡೆದುಕೊಂಡಿದ್ದಾರೆ.
ಇತ್ತೀಚಿಗೆ ಶಿವಮೊಗ್ಗ ವಿವಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯದ ಕುಲಪತಿ ಡಾ. ಎಂ.ಕೆ. ನಾಯಕ್, ಪದ್ಮಶ್ರೀ ಪುರಸ್ಕøತ ಮೈಸೂರು ಸಿಎಫ್‍ಟಿಆರ್‍ಐ ವಿಶ್ರಾಂತ ನಿರ್ದೇಶಕ ಡಾ. ವಿ.ಪಿ. ಪ್ರಕಾಶ್ ಪ್ರಶಸ್ತಿ ಪ್ರದಾನ ಮಾಡಿದರು.ಗೋಣಿಕೊಪ್ಪ ವರದಿ : ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಅರಣ್ಯ ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಡಾ. ಜಿ. ಎಂ. ದೇವಗಿರಿ ಪಡೆದುಕೊಂಡಿದ್ದಾರೆ.
ಇತ್ತೀಚಿಗೆ ಶಿವಮೊಗ್ಗ ವಿವಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯದ ಕುಲಪತಿ ಡಾ. ಎಂ.ಕೆ. ನಾಯಕ್, ಪದ್ಮಶ್ರೀ ಪುರಸ್ಕøತ ಮೈಸೂರು ಸಿಎಫ್‍ಟಿಆರ್‍ಐ ವಿಶ್ರಾಂತ ನಿರ್ದೇಶಕ ಡಾ. ವಿ.ಪಿ. ಪ್ರಕಾಶ್ ಪ್ರಶಸ್ತಿ ಪ್ರದಾನ ಮಾಡಿದರು.ಸೋಮವಾರಪೇಟೆ : ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ವೀರಾಜಪೇಟೆಯ ಸೆಂಟ್ ಆನ್ಸ್ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕರ ಹ್ಯಾಂಡ್‍ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ ಇಲ್ಲಿನ ಓಎಲ್‍ವಿ ಪ್ರೌಢಶಾಲಾ ವಿದ್ಯಾರ್ಥಿಗಳು, ಉತ್ತಮ ಆಟ ಪ್ರದರ್ಶಿಸುವ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ಆದಿತ್ಯ, ವಿಶ್ವಾಸ್, ಸಾಧನ್, ದರ್ಶನ್ ಮತ್ತು ಗಗನ್ ಅವರುಗಳು ಬಹುಮಾನ ಪಡೆಯುವ ಮೂಲಕ ಹಾಸನದಲ್ಲಿ ನಡೆಯುವ ಪಂದ್ಯಾವಳಿಗೆ ಆಯ್ಕೆಯಾಗಿದ್ದು, ಇವರಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹೆಚ್.ಟಿ. ಹರೀಶ್ ತರಬೇತಿ ನೀಡಿದ್ದಾರೆ.ಸೋಮವಾರಪೇಟೆ : ವೀರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ತಾಲೂಕು ಒಕ್ಕಲಿಗರ ಸಂಘದ ವಿಶ್ವ ಮಾನವ ಕುವೆಂಪು ಪ್ರೌಢಶಾಲೆ ವಿದ್ಯಾರ್ಥಿನಿ, ಎಂ.ಆರ್. ಯಶಸ್ವಿನಿ ಚೆಸ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.ಸೋಮವಾರಪೇಟೆ : ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನ ಆಶ್ರಯ ದಲ್ಲಿ ಸಂತ ಜೋಸೆಫರ ಪ್ರೌಢ ಶಾಲೆಯ ಸಹಯೋಗದೊಂದಿಗೆ ಶಾಲಾ ಸಭಾಂಗಣದಲ್ಲಿ ಗುರು ವಂದನಾ ಕಾರ್ಯಕ್ರಮ ನಡೆಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪೆರಿಗ್ರಿನ್ ಎಸ್.ಮಚ್ಚಾಡೋ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಾತೃ ಹೃದಯವಿರುವ ಶಿಕ್ಷಕರಿಗೆ ವಿದ್ಯಾರ್ಥಿಗಳು ತಾಯಿಯ ಸ್ಥಾನವನ್ನು ನೀಡಬೇಕು ಎಂದರು.
ಕನ್ನಡ ನಮ್ಮ ಮಾತೃಭಾಷೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಕಲಿಯುವ ಮೂಲಕ ಗೌರವ ಸಲ್ಲಿಸಬೇಕು. ಕೊನೆಯ ವರೆಗೂ ಮಾತೃಭಾಷೆ ನಮ್ಮನ್ನು ರಕ್ಷಿಸುತ್ತದೆ. ಸಾಹಿತ್ಯವನ್ನು ಓದುವದ ರೊಂದಿಗೆ ಭಾಷಾ ಹಿಡಿತವನ್ನು ಸಾಧಿಸಬೇಕು ಎಂದು ಹೇಳಿದರು.
ಹತ್ತನೇ ತರಗತಿ ಪರೀಕ್ಷೆಯಲ್ಲಿ ಕನ್ನಡದಲ್ಲಿ 125 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ನೀಡಿದ ಕನ್ನಡ ಶಿಕ್ಷಕರುಗಳಾದ ಸಂತ ಜೋಸೆಫರ ಪ್ರೌಢಶಾಲೆಯ ಬಿ.ಎ. ಸನತ್, ಸುಜಾತ ಕುಮಾರಿ, ಸಾಂದೀಪನಿ ಶಾಲೆಯ ಎನ್. ಮಹಾದೇವಮ್ಮ, ಓ.ಎಲ್.ವಿ. ಕಾನ್ವೆಂಟ್‍ನ ಸಿ.ಜಿ. ದಿನೇಶ್, ವಿಶ್ವ ಮಾನವ ಕುವೆಂಪು ಪ್ರೌಢಶಾಲೆಯ ಎಸ್.ಪಿ. ಸ್ಮಿತಾ ಅವರುಗಳನ್ನು ಸನ್ಮಾನಿಸಲಾಯಿತು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಫಾದರ್ ಎಂ. ರಾಯಪ್ಪ, ಕವಯತ್ರಿ ಹಾಗೂ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಎಲಿಜಬೆತ್ ಲೋಬೋ, ಸಂತ ಜೋಸೆಫರ ಶಾಲೆಯ ಮುಖ್ಯ ಶಿಕ್ಷಕ ಹ್ಯಾರಿ ಮೋರಸ್, ಶಿಕ್ಷಕಿ ಕುಸುಮ, ಹ್ಯೂಬರ್ಟ್ ಡಯಾಸ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎನ್.ಎಂ.ನಾಗೇಶ್ ಅವರು ಗಳನ್ನು ಅಭಿನಂದಿಸಲಾಯಿತು.
ವೇದಿಕೆಯಲ್ಲಿ ಕ.ಸಾ.ಪ. ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್, ಪ್ರಾಂಶುಪಾಲ ಅಂತೋಣಿರಾಜ್, ಜಿ.ಪಂ. ಸದಸ್ಯೆರಾದ ಪೂರ್ಣಿಮಾ ಗೋಪಾಲ್, ತಾ.ಪಂ. ಸದಸ್ಯ ಬಿ.ಬಿ. ಸತೀಶ್, ಬಿ.ಇ.ಒ. ನಾಗರಾಜಯ್ಯ, ಬಳಗುಂದ ಗ್ರಾ.ಪಂ. ಸದಸ್ಯ ಯೋಗೇಂದ್ರ, ಮೊರಾರ್ಜಿ ಶಾಲೆಯ ಶಿಕ್ಷಕ ಸತೀಶ್, ತಾಲೂಕು ಯುವ ಒಕ್ಕೂಟದ ಅಧ್ಯಕ್ಷೆ ಚಂದ್ರಿಕಾ ಉಪಸ್ಥಿತರಿದ್ದರು. ಸೋಮವಾರಪೇಟೆ ಪಟ್ಟಣದ ಹಿರಿಯ ಕವಿಗಳಾದ ನ.ಲ. ವಿಜಯ ಅವರು ಶಿಕ್ಷಕರ ಬಗ್ಗೆ ವಾಚಿಸಿದ ಕವನ ಎಲ್ಲರ ಗಮನ ಸೆಳೆಯಿತು.