ಸೋಮವಾರಪೇಟೆ, ಸೆ. 24: ಸಮೀಪದ ಗಣಗೂರು ಗ್ರಾ.ಪಂ.ಯ ಗ್ರಾಮಸಭೆ ತಾ. 25 ರಂದು (ಇಂದು) ಪೂರ್ವಾಹ್ನ 11 ಗಂಟೆಗೆ ಗೋಣಿ ಮರೂರು ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತ ವಹಿಸಲಿದ್ದು, ಜಿ.ಪಂ. ಸದಸ್ಯ ಶ್ರೀನಿವಾಸ್, ತಾ.ಪಂ. ಸದಸ್ಯೆ ಸವಿತ ಈರಪ್ಪ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಲಿ ದ್ದಾರೆ ಎಂದು ಪ್ರಕಟಣೆ ತಿಳಿಸಿದೆ.