ಸೋಮವಾರಪೇಟೆ, ಸೆ. 24: ಸಮೀಪದ ದೊಡ್ಡಮಳ್ತೆ ಗ್ರಾಮದ ಕಾಗಡಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮ ನಡೆಯಿತು. ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಪಿಡಿಓ ಹೇಮಲತಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾಗಡಿಕಟ್ಟೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಬಿ.ಎಂ. ದಿವ್ಯ ಅವರು, ಗರ್ಭಿಣಿಯರ ಆರೋಗ್ಯ ಮತ್ತು ಮಕ್ಕಳ ಪೌಷ್ಟಿಕ ಆಹಾರ, ಮಾತೃಪೂರ್ಣ, ಮಾತೃವಂದನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರಾದ ಪೂರ್ಣಿಮ, ಸವಿತ, ಆಶಾ ಕಾರ್ಯಕರ್ತೆ ಈಶ್ವರಿ ಉಪಸ್ಥಿತರಿದ್ದರು.