ಸೋಮವಾರಪೇಟೆ, ಸೆ. 24: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯ ಪಾಕ್ಷಿಕ ಜಾಗೃತಿ ಜಾಥಾ ಪಟ್ಟಣದಲ್ಲಿ ನಡೆಯಿತು.
ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಅವರು ಜಾಥಾಕ್ಕೆ ಚಾಲನೆ ನೀಡಿದರು. ಪಟ್ಟಣದ ಮುಖ್ಯ ಬೀದಿಯಲ್ಲಿ ಸಂಚರಿಸಿ, ಆಯುಷ್ಮಾನ್ ಆರೋಗ್ಯ ಯೋಜನೆಯ ಸೌಲಭ್ಯಗಳ ಬಗ್ಗೆ ಆಶಾ ಕಾರ್ಯಕರ್ತೆಯರು ಮತ್ತು ಆಸ್ಪತ್ರೆ ಶುಶ್ರೂಷಕಿಯರು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಿ.ಬಿ. ಸುನೀಲ್, ತಾಲೂಕು ಆರೋಗ್ಯಾಧಿಕಾರಿ ಶ್ರೀನಿವಾಸ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.