ಮಡಿಕೇರಿ, ಸೆ. 24 : ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರಿಕೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಅಧ್ಯಕ್ಷರಾದ ಬೇಕಲ್ ದೇವರಾಜ್ ಅವರ ಅಧ್ಯಕ್ಷತೆಯಲ್ಲಿ ಕರಿಕೆಯ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರ ಕಾರ್ಯವೈಖರಿಯನ್ನು ಶ್ಲಾಘಿಸಿದರು.
ಜನಪರವಾದ ಕಾಳಜಿಯನ್ನು ಮುಂದುವರಿಸಿ ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವನ್ನು ಮತ್ತಷ್ಟು ಬಲಗೊಳಿಸಿ ಎಲ್ಲಾ ಸ್ಥಾನಗಳನ್ನು ಗೆಲ್ಲುವಂತೆ ಕರೆ ನೀಡಿದ ಅವರು, ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಲ್ಲಾ ರೀತಿಯ ಬೆಂಬಲ ನೀಡುವದಾಗಿ ಹೇಳಿದರು. ಕರಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಚಂದ್ರ ನಾಯರ್ ಮಾತನಾಡಿ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೈತ್ರಿ ಸರಕಾರದ ಸಂದರ್ಭದಲ್ಲಿ ತಂದಂತಹ ಅನುದಾನ ಮತ್ತು ಮಾಡಿದ ಕಾಮಗಾರಿ ಬಗ್ಗೆ ವರದಿ ನೀಡಿದರು.
ಸಾಮಾಜಿಕ ಜಾಲತಾಣದ ಸೂರಜ್ ಹೊಸೂರು ಅವರು ಮಾತನಾಡಿ, ಯುವ ಜನತೆ ಪಕ್ಷದ ಬೆಳವಣಿಗೆಯಲ್ಲಿ ಸಾಮಾಜಿಕ ಜಾಲತಾಣದತ್ತ ಮತ್ತಷ್ಟು ಗಮನ ಹರಿಸುವಂತೆ ಕರೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುನಿಲ್ ಪತ್ರಾವೋ, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಸಂಪಾಜೆ ಹಾಗೂ ನಾಪೆÇೀಕ್ಲು ಬ್ಲಾಕ್ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಹ್ಯಾರಿಸ್ ಪದಕಲ್ಲು ಮಾತನಾಡಿದರು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮಾನಾಥ್ ಬೇಕಲ್, ಕರಿಕೆ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಸಂಪಾಜೆ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎ.ಕೆ ಹ್ಯಾರಿಸ್, ನಾಪೆÇೀಕ್ಲು ಬ್ಲಾಕ್ ಮಹಿಳಾ ಕಾಂಗ್ರೆಸ್‍ನ ಅಧ್ಯಕ್ಷೆ ರಾಜೇಶ್ವರಿ ಸಂಪಾಜೆ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಿ.ಜೆ. ಶರಣ್ ಕುಮಾರ್, ಬ್ಲಾಕ್ ಕಾರ್ಯದರ್ಶಿ ಬಶೀರ್, ಕರಿಕೆ ಗ್ರಾಮ ಪಂಚಾಯತ್ ಹಾಗೂ ಕೃಷಿ ಸಹಕಾರಿ ಸಂಘದ ಎಲ್ಲಾ ಚುನಾಯಿತ ಸದಸ್ಯರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.