ಮಡಿಕೇರಿ, ಸೆ. 24: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾಮ ಪಂಚಾಯಿತಿ ಹಾಕತ್ತೂರು ಸಂಯುಕ್ತ ಆಶ್ರಯದಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ತೊಂಬತ್ತುಮನೆಯಲ್ಲಿ ನೇತ್ರ ತಪಾಸಣಾ ಕಾರ್ಯಕ್ರಮ ನಡೆಸಲಾಯಿತು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನೇತ್ರ ತಜ್ಞ ಆರ್.ಎನ್. ರವಿ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಸ್ಥಳೀಯರಿಗೆ ನೇತ್ರ ತಪಾಸಣೆ ಮಾಡಿದರು. ಕಣ್ಣಿನ ಮಹತ್ವವನ್ನು ಮನಮುಟ್ಟುವಂತೆ ತಿಳಿಸಿಕೊಟ್ಟರು. 60 ಮಂದಿ ಪಾಲ್ಗೊಂಡಿದ್ದರು. ಗ್ರಾ.ಪಂ. ಅಧ್ಯಕ್ಷೆ ಮಂದ್ರೀರ ಆರ್. ಶಾರದ ಅಧ್ಯಕ್ಷತೆ ವಹಿಸಿದ್ದರು. ಉದ್ಘಾಟನೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಎಸ್.ಎಸ್. ದಿನೇಶ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶೇಷ ಆಹ್ವಾನಿತರಾಗಿ ಹಾಕತ್ತೂರು ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಪಿ.ಈ. ದೇವಿಪ್ರಸಾದ್ ಮತ್ತು ಬಿ.ಎ. ಸರೋಜ ಪಾಲ್ಗೊಂಡಿದ್ದರು. ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ನೇತ್ರಾವತಿ ನಿರೂಪಿಸಿ, ಸಿ.ಪಿ. ಪೊನ್ನಮ್ಮ ಸ್ವಾಗತಿಸಿ, ದಿವ್ಯ ವಂದಿಸಿದರು. ನಂತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಮಕ್ಕಳಿಗೆ, ನೆರೆದಿದ್ದ ಗ್ರಾಮಸ್ಥರಿಗೆ ಸಿಹಿ ಹಂಚಿದರು.