*ಗೋಣಿಕೊಪ್ಪಲು, ಸೆ. 25: ಶ್ರೀ ಕಾವೇರಿ ದಸರಾ ಸಮಿತಿ ಆಚರಿಸುವ 41ನೇ ದಸರಾ ಜನೋತ್ಸವದ ಅಂಗವಾಗಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಅ. 6 ರಂದು ಮಹಿಳಾ ದಸರಾ ನಡೆಯಲಿದೆ.

ನೂರೇರ ರತಿ ಅಚ್ಚಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಜಾನಪದ ನೃತ್ಯ, ಜಾನಪದ ಗೀತೆ, ಕಣ್ಣು ಕಟ್ಟಿ ಸಂಗಾತಿಗೆ ಮೇಕಪ್ ಮಾಡುವುದು, ವಾಲಗತ್ತಾಟ್, ಪೌರಾಣಿಕ ಛದ್ಮವೇಷ, ಪಾಸಿಂಗ್ ದ ಬಾಲ್, ಸಂಗೀತ ಕುರ್ಚಿ, ಹಗ್ಗಜಗ್ಗಾಟ, ಬೆಲೂನ್ ಒಡೆಯುವದು ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆ 10ಗಂಟೆಗೆ ಪ್ರಾಥಮಿಕ ಶಾಲಾ ಮೈದಾನದಲ್ಲಿ ಅತಿಥಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಮಹಿಳಾ ದಸರಾ ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.