ಮಡಿಕೇರಿ, ಸೆ. 25: ಕೊಡಗು ಗೌಡ ನಿವೃತ್ತ ನೌಕರರ ಸಂಘದಿಂದ ಸಂಘದ ಸದಸ್ಯರು ಮತ್ತು ಅವರ ಮಕ್ಕಳು 2018-2019ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಆದ್ಯತೆಯ ಮೇರೆಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಆಸಕ್ತರು ತಮ್ಮ ಸಾಧನೆಯ ಪ್ರತಿಯನ್ನು ಅಕ್ಟೋಬರ್ 10 ಒಳಗೆ ಕಾರ್ಯದರ್ಶಿ ಕೊಡಗು ಗೌಡ ನಿವೃತ್ತ ನೌಕರರ ಸಂಘದ ಕಚೇರಿ, ಕೊಡಗು ಗೌಡ ಸಮಾಜ ಮಡಿಕೇರಿ ಇಲ್ಲಿಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಕಳುಹಿಸುವಂತೆ ತಿಳಿಸಲಾಗಿದೆ. ನಂತರ ಬಂದ ಅರ್ಜಿಯನ್ನು ಸ್ವೀಕರಿಸಲಾಗುವದಿಲ್ಲ.

ಹೆಚ್ಚಿನ ಮಾಹಿತಿಗೆ 9663725152 ನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ತಿಳಿಸಿದ್ದಾರೆ.