ಸೋಮವಾರಪೇಟೆ, ಸೆ. 26: ಇಲ್ಲಿನ ಕೊಡವ ಸಮಾಜದ ವತಿಯಿಂದ ತಾ. 28 ರಂದು ಪೂರ್ವಾಹ್ನ 10.30ಕ್ಕೆ ಕೊಡವ ಸಮಾಜ ಸಭಾಂಗಣದಲ್ಲಿ ಕೈಲ್ ಮುಹೂರ್ತ ಸಂತೋಷಕೂಟ ಆಯೋಜಿಸಲಾಗಿದೆ ಎಂದು ಸಮಾಜದ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಮುಕ್ಕಾಟ್ಟಿರ ಟಿ. ನಾಣಯ್ಯ ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಸಮಾಜದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.