ಸೋಮವಾರಪೇಟೆ, ಸೆ. 26: ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಇಲ್ಲಿನ ಮಹಿಳಾ ಸಮಾಜದಲ್ಲಿ ವಿಶ್ವಕರ್ಮ ಜಯಂತೋತ್ಸವ ಮತ್ತು ವಾರ್ಷಿಕ ಮಹಾಸಭೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಎಸ್.ಜೆ. ದೇವದಾಸ್ ಮಾತನಾಡಿ, ಸಂಘದÀ ಬೆಳವಣಿಗೆಗೆ ಸದಸ್ಯರ ಸಹಕಾರ ಮುಖ್ಯವಾಗಿದ್ದು, ಎಲ್ಲ ಸದಸ್ಯರು ಸಂಘದ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಹಕಾರ ನೀಡಬೇಕೆಂದರು.

ಸಭೆಯ ಅಧ್ಯಕ್ಷತೆಯನ್ನು ತಾಲೂಕು ಘಟಕದ ಅಧ್ಯಕ್ಷ ಕೆ.ಕೆ. ರಮೇಶ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗರಾಜ್, ತಾಲೂಕು ಘಟಕದ ಉಪಾಧ್ಯಕ್ಷ ಶ್ರೀನಿವಾಸಾಚಾರ್, ಕಾರ್ಯದರ್ಶಿ ರಾಜು, ಸಹಕಾರ್ಯದರ್ಶಿಗಳಾದ ಲೋಹಿತಾಶ್ವ, ಟಿ.ಕೆ. ಲೋಕೇಶ್, ನಿರ್ದೇಶಕರುಗಳಾದ ತ್ಯಾಗರಾಜು, ಮಂಜುನಾಥ್ ಆಚಾರ್ ಮತ್ತಿತರರು ಉಪಸ್ಥಿತರಿದ್ದರು. ಹರೀಶ್ ಆಚಾರ್ ನೇತೃತ್ವದಲ್ಲಿ ವಿಶ್ವಕರ್ಮ ಪೂಜಾ ಕಾರ್ಯಕ್ರಮ ನಡೆಯಿತು.