ಮಡಿಕೇರಿ, ಸೆ. 26: ಸಮಗ್ರ ಸಂವಿಧಾನದ ರಚನೆ ಮಾಡುವದರ ಮೂಲಕ ಸಮಾಜಕ್ಕೆ ಸಮಾನತೆ ಸಾರಿದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಇಂದು ಪ್ರಸ್ತುತವಾಗಿದ್ದು, ವಿದ್ಯಾರ್ಥಿ ಜೀವನದಲ್ಲಿ ಅಂಬೇಡ್ಕರ್ ಅವರ ಪುಸ್ತಕಗಳನ್ನು ಓದುವದರ ಮೂಲಕ ಅವರ ವಿಚಾರಧಾರೆಗಳನ್ನು ಸಮಾಜಕ್ಕೆ ತಿಳಿಸಬೇಕೆಂದು ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಮಹಾಲಿಂಗಯ್ಯ ವಿದ್ಯಾರ್ಥಿಗಳಿಗೆ ಕರೆಕೊಟ್ಟರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕೂಡಿಗೆ ಸರಕಾರಿ ಪರವಿಪೂರ್ವ ಕಾಲೇಜು ಆಯೋಜಿಸಿದ್ದ ‘ಡಾ. ಬಿ.ಆರ್. ಅಂಬೇಡ್ಕರ್ ಪುಸ್ತಕ ಓದು’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಅವರು ತತ್ವಜ್ಞಾನಿಯಾಗಿ, ಸಮಾಜ ಜ್ಞಾನಿಯಾಗಿ, ಪತ್ರಿಕೋದ್ಯಮಿಯಾಗಿ ಸಮಾಜದಲ್ಲಿದ್ದ ಮೂಢನಂಬಿಕೆಗಳ ಕಂದಕ, ಮೂಢನಂಬಿಕೆ ಹೋಗಲಾಡಿಸಲು ಶ್ರಮಿಸಿದರು ಎಂದರು.
ಪ್ರಾಸ್ತಾವಿಕ ಮಾತನಾಡಿದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟ ಡಾ. ಅಂಬೇಡ್ಕರ್ ಅವರು ಮಾನವನ ಹಿತಕಾಯಲು ಅವರು ಮಾಡಿದ ಸಾಧನೆಯನ್ನು ನೆನೆಯಬೇಕಾದರೆ ಅವರ ಪುಸ್ತಕಗಳನ್ನು ಓದಬೇಕು ಎಂದರು.
ಸಂವಿಧಾನದಲ್ಲಿ ಸಮಗ್ರ ಸಮಾನತೆ ಸಾರಿದ್ದಾರೆ. ಕಾಲ್ರ್ಸ್ ಮಾಕ್ರ್ಸ್, ಬಸವ, ಬುದ್ದ, ಅಂಬೇಡ್ಕರ್ ತತ್ವಗಳು ಇಂದು ಪ್ರಸ್ತುತವಾಗಿದೆ ಎಂದರು.
ಅಂಬೇಡ್ಕರ್ ಅವರ ಪುಸ್ತಕಗಳು ಇಲಾಖೆಯಲ್ಲಿ ಲಭ್ಯವಿದ್ದು, ಅವುಗಳನ್ನು ಓದುವ ಹವ್ಯಾಸ ನಮ್ಮಲ್ಲಿ ಬರಬೇಕೆಂದರು. ಅಂಬೇಡ್ಕರ್ ಅವರ ಬಗ್ಗೆ ತಿಳುವಳಿಕೆ ಅಗತ್ಯ ಎಂದ ಅವರು, ಕಾನೂನಿನ ಮುಂದೆ ಎಲ್ಲರೂ ಸಮಾನರು ಅದಕ್ಕಾಗಿಯೇ ಮತ ಚಲಾವಣೆ ಪ್ರತಿಯೊಬ್ಬರಿಗೂ ಸಲ್ಲಬೇಕು ಎಂಬ ಉದ್ದೇಶದಿಂದ ಮತದಾನ ಹಕ್ಕನ್ನು ಸಂವಿಧಾನದಲ್ಲಿ ಅಳವಡಿಸಿದ್ದ ಕೀರ್ತಿ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದರು.
ವೇದಿಕೆಯಲ್ಲಿ ಉಪನ್ಯಾಸಕರುಗಳಾದ ಹನುಮರಾಜ್, ರಮೇಶ್, ಸತೀಶ್, ನಾಗಪ್ಪ ಯಾಲಕ್ಕಿಕಟ್ಟೆ, ಪಾವನ, ಲೆಸೆಟ್ ಪಲ್ಲವಿ, ಸೂಶಿ ತಂಗಚ್ಚನ್ ಇದ್ದರು. ಪ್ರಾಯೋಜಿತ ಕಾರ್ಯಕ್ರಮದಲ್ಲಿ ಕಲಾವಿದರುಗಳಿಂದ ಗೀತಾಗಾಯನ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಮೊದಲಿಗೆ ಕೋಮಲ ಸ್ವಾಗತಿಸಿ, ಸವಿತ ನಿರೂಪಿಸಿ, ವರುಣ್ ವಂದಿಸಿದರು.