ಮಡಿಕೇರಿ, ಸೆ. 26: ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ತಾ. 21 ರಂದು ಮಡಿಕೇರಿಯ ಬಾಲಭವನದ ಕಟ್ಟಡದಲ್ಲಿ ಸಂಘದ ಅಧ್ಯಕ್ಷ ಬಿ.ಈ. ಬೋಪಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರು ಮಾತನಾಡಿ, ಸಂಘವು ವ್ಯಾಪಾರ-ವಹಿವಾಟು ನಡೆಸಿ ರೂ. 13.16 ಲಕ್ಷ ವ್ಯಾಪಾರ ಲಾಭ ಹಾಗೂ ರೂ. 13.06 ಲಕ್ಷ ನಿವ್ವಳ ಲಾಭ ಗಳಿಸಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ತಿಳಿಸಿದರು.
ಸಂಘದ ಮೃತ ಸದಸ್ಯರುಗಳಿಗೆ ಸಂತಾಪ ಸೂಚಿಸಿ ಮೌನಾಚರಣೆ ಮಾಡಲಾಯಿತು. ಸಂಘದ ಸದಸ್ಯರಿಗೆ ಶೇ. 25 ಡಿವಿಡೆಂಡ್ ಘೋಷಿಸಲಾಗಿದೆ ಎಂದು ತಿಳಿಸಿದರು.
ಸಂಘದ ಕಾರ್ಯನಿರ್ವಹಣಾಧಿಕಾರಿ ಎಂ.ಎಂ. ತಮ್ಮಯ್ಯ ವಾರ್ಷಿಕ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಸಭೆಯಲ್ಲಿ ಸಂಘದ ಸದಸ್ಯರುಗಳು, ಸಂಘದ ನಿರ್ದೇಶಕರುಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಉಪಾಧ್ಯಕ್ಷ ಕೆ.ಆರ್. ಅನಂತ್ಕುಮಾರ್ ವಂದನಾರ್ಪಣೆ ಮಾಡಿದರು.