*ಗೋಣಿಕೊಪ್ಪಲು, ಸೆ. 26: ಅ. 2 ರಂದು 41ನೇ ವರ್ಷದ ದಸರಾ ಜನೋತ್ಸವದ ಅಂಗವಾಗಿ ಯುವ ದಸರಾ ಕಾರ್ಯಕ್ರಮ ನಡೆಯಲಿದೆ ಎಂದು ಯುವ ದಸರಾ ಸಮಿತಿ ಅಧ್ಯಕ್ಷ ಕುಲ್ಲಚಂಡ ಚಿಣ್ಣಪ್ಪ ತಿಳಿಸಿದ್ದಾರೆ.
ಅಂದು ರಾತ್ರಿ 8 ಗಂಟೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಪ್ರೇಕ್ಷಕರನ್ನು ರಂಜಿಸಲು ಯುವ ದಸರಾ ವೇದಿಕೆ ಸಜ್ಜುಗೊಳ್ಳುತ್ತಿದೆ. ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಹಾಗೂ ಜಿಲ್ಲಾ ನೃತ್ಯ ತಂಡಗಳಿಂದ ಸಂಸ್ಕೃತಿಯ ವೈವಿಧ್ಯಮಯ ನೃತ್ಯಗಳು ಮೂಡಿಬರಲಿವೆ. ಜಿಲ್ಲೆಯ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ನೃತ್ಯ ತಂಡಗಳು ಯುವದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಬಹುದೆಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9945680185, 7760803783 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ಮಕ್ಕಳ ದಸರಾ: ಅ. 6 ರಂದು ಮಕ್ಕಳ ದಸರಾ ಕಾರ್ಯಕ್ರಮ ಮತ್ತು ಸ್ಪರ್ಧೆ ಇಲ್ಲಿನ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಶ್ರೀ ಕಾವೇರಿ ದಸರಾ ಸಮಿತಿ ಅಧ್ಯಕ್ಷ ಕೆ.ಜಿ ರಾಮಕೃಷ್ಣ ಅವರು ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಮಕ್ಕಳ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವದು. ಮಕ್ಕಳ ಸಂತೆ, ಮಕ್ಕಳ ವಿಜ್ಞಾನ ವಸ್ತು ಪ್ರದರ್ಶನ, ಗೋಣಿಚೀಲದ ಓಟ, ಸಾಮೂಹಿಕ ಜಾನಪದ ಗೀತೆ, ಚಿತ್ರ ಕಲೆ ವೈಯಕ್ತಿಕ ಸ್ಪರ್ಧೆ, ಪೌರಾಣಿಕ ಛದ್ಮವೇಷ ಸ್ಪರ್ಧೆ, ಜಾನಪದ ಸಾಮೂಹಿಕ ನೃತ್ಯ, ಭರತನಾಟ್ಯ ರೂಪಕ ನೃತ್ಯ ಸ್ಪರ್ಧೆಗಳು ನಡೆಯಲಿವೆ. 1ರಿಂದ 10ನೇ ತರಗತಿಯವರೆಗೆ ಮೂರು ವಿಭಾಗಗಳಲ್ಲಿ ಈ ಸ್ಪರ್ಧೆಗಳು ನÀಡೆಯಲಿವೆ.
ಮುಂಚಿತವಾಗಿ ಹೆಸರು ನೋಂದಾಯಿಸಿಕೊಂಡವರು ಮಾತ್ರ ಭಾಗವಹಿಸಲು ಅವಕಾಶವಿದೆ. ಅಕ್ಟೋಬರ್ 3ರೊಳಗೆ ತಮ್ಮ ಹೆಸರನ್ನು ನೋಂದಾಯಿಸತಕ್ಕದ್ದು. ಗೋಣಿಚೀಲ ಓಟದ ಸ್ಪರ್ಧೆಯಲ್ಲಿ ಭಾಗವಹಿಸುವವರು ಚೀಲವನ್ನು ತಾವೇ ತರಬೇಕು ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 8277132902, 7619270529 9740024284 ಮತ್ತು 9945794414 ಸಂಪರ್ಕಿಸಬಹುದಾಗಿದೆ.