ಗೋಣಿಕೊಪ್ಪ ವರದಿ, ಸೆ. 26: ಇಲ್ಲಿನ ಕಾವೇರಿ ಕಾಲೇಜಿನಲ್ಲಿ ಅಕ್ಟೋಬರ್ 4 ರಂದು ಕಾಲೇಜು ವಿದ್ಯಾರ್ಥಿಗಳಿಗಾಗಿ ಡಾ. ಎಂ.ಎಂ. ಚಂಗಪ್ಪ ಜ್ಞಾಪಕಾರ್ಥ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆಯ ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಪ್ರತಿ ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳಿಗೆ ಭಾಗವಹಿಸುವ ಅವಕಾಶವಿದ್ದು, ಭಾಗವಹಿಸುವ ವಿದ್ಯಾರ್ಥಿಗಳಿಗೆ ಒಂದು ಕಡೆಯ ಪ್ರಯಾಣ ವೆಚ್ಚ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗುವದು. ಅಂದು ಬೆಳಿಗ್ಗೆ 9.45 ಕ್ಕೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ವಿಜೇತರಿಗೆ ರೋಲಿಂಗ್ ಟ್ರೋಫಿ ಹಾಗೂ ನಗದು ಬಹುಮಾನ ನೀಡಲಾಗುವದು. ಭಾಗವಹಿಸುವ ತಂಡಗಳು ತಾ. 30 ರೊಳಗೆ ಹೆಸರು ನೋದಾಯಿಸಿಕೊಳ್ಳುವಂತೆ ಪ್ರಾಂಶುಪಾಲ ಪ್ರೊ. ಕೆ.ವಿ. ಕುಸುಮಾಧರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9900579579 ಸಂಖ್ಯೆ ಸಂಪರ್ಕಿಸಬಹುದು.