ವೀರಾಜಪೇಟೆ: ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಸ್ವಯಂ ಸೇವಕರು ಸ್ವಂತ ಆಸಕ್ತಿಯಿಂದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರು ಹಾಗೂ ಮಾಜಿ ರಾ.ಸೇ. ಯೋಜನಾಧಿಕಾರಿ ನೆರಪಂಡ ಹರ್ಷ ಮಂದಣ್ಣ ಹೇಳಿದರು.

ವೀರಾಜಪೇಟೆ ಕಾವೇರಿ ಪದವಿ ಮತ್ತು ಪದವಿಪೂರ್ವ ಕಾಲೇಜಿನ ಜಂಟಿ ಆಯೋಜನೆಯಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯನ್ನು ಧ್ವಜಾರೋಹಣದ ಮೂಲಕ ಉದ್ಘಾಟಿಸಿ ಮಾತನಾಡಿದ ಹರ್ಷ ಮಂದಣ್ಣ ಅವರು, ದೇಶ ನಮಗೆ ಏನು ಮಾಡಿದೆ ಎನ್ನುವ ಮೊದಲು ನಾವು ದೇಶಕ್ಕೆ ಏನು ಮಾಡಿದ್ದೇವೆ ಎಂದು ಪ್ರಶ್ನಿಸಿಕೊಳ್ಳಬೇಕು. ರಾ.ಸೇ.ಯೋ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸುವದರಿಂದ ವ್ಯಕ್ತಿತ್ವ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಕಿವಿಮಾತು ಹೇಳಿದರು.

ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎಂ. ನಾಣಯ್ಯ ಮಾತನಾಡಿ, ರಾ.ಸೇ. ಯೋಜನೆಯಲ್ಲಿ ಪಾಲ್ಗೊಳ್ಳುವದರಿಂದ ಒಳ್ಳೆಯ ಸಂಸ್ಕಾರ ಕಲಿಯುವದರೊಂದಿಗೆ ಸಮಾಜ ಸೇವೆಯ ಮನೋಭಾವ ಮೈಗೂಡಿಸಿಕೊಳ್ಳಬಹುದೆಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಇಟ್ಟಿರ ಕಮಲಾಕ್ಷಿ ಬಿದ್ದಪ್ಪ ಮಾತನಾಡಿ, ವಿದ್ಯಾರ್ಥಿಗಳು ಪ್ರಶ್ನೆ ಕೇಳುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಹಾಗೂ ಜ್ಞಾನ ಸಂಪಾದನೆಯತ್ತ ಒಲವು ತೋರಿಸಬೇಕೆಂದು ಹೇಳಿದರು.

ಸಮಾರಂಭದಲ್ಲಿ ರಾ.ಸೇ. ಯೋಜನಾಧಿಕಾರಿಗಳಾದ ಹೆಚ್.ವಿ. ನಾಗರಾಜು, ಸಿ.ಪಿ. ನಿರ್ಮಿತಾ ಹಾಗೂ ದೀಪಾ ಪಾಲ್ಗೊಂಡಿದ್ದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯೊಂದಿಗೆ ರಾ.ಸೇ.ಯೋ ಸ್ವಯಂಸೇವಕರು ಭಾಗವಹಿಸಿದ್ದರು.

ಕುಶಾಲನಗರ: ವಿದ್ಯಾರ್ಥಿಗಳು ಸಮರ್ಪಣೆ ಮತ್ತು ಸಮನ್ವಯ ಗುಣಗಳನ್ನು ಅಳವಡಿಸಿಕೊಂಡಲ್ಲಿ ಜೀವನದ ಗುರಿ ಸಾಧಿಸಬಹುದು ಎಂದು ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಆರ್. ಹೆಗ್ಡೆ ಹೇಳಿದರು.

ಕುಶಾಲನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2019-20ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಮಿತಿ, ಕ್ರೀಡೆ, ಸಾಂಸ್ಕøತಿಕ, ರಾಷ್ಟ್ರೀಯ ಸೇವಾ ಯೋಜನೆ, ರೆಡ್‍ಕ್ರಾಸ್, ರೋವರ್ ಮತ್ತು ರೇಂಜರ್ ಹಾಗೂ ಆಂಗ್ಲಭಾಷಾ ಪ್ರಯೋಗಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಅವರು, ವಿದ್ಯಾರ್ಜನೆ ಕಾಲದ ಅವಧಿಯಲ್ಲಿ ಕೇವಲ ಜ್ಞಾನಗಳಿಕೆಗೆ ಮಾತ್ರ ವಿದ್ಯಾರ್ಥಿಗಳು ಸೀಮಿತವಾಗಬೇಕು. ಶಿಕ್ಷಣಕ್ಕೆ ತನ್ನನ್ನು ಸಮರ್ಪಿಸಿಕೊಂಡಲ್ಲಿ ಜ್ಞಾನಾರ್ಜನೆ ಸುಲಭವಾಗಲಿದೆ. ಅತ್ಯುತ್ತಮ ಸಂಘಟನಾ ಚತುರತೆ, ನಾಯಕತ್ವ ಗುಣಗಳು ಸಮಾಜದಲ್ಲಿ ನಿಮ್ಮ ಅಸ್ತಿತ್ವವನ್ನು ಪ್ರತಿಬಿಂಬಿಸುತ್ತದೆ ಎಂದರು.

ಜಿ.ಪಂ. ಸದಸ್ಯೆ ಕೆ.ಆರ್. ಮಂಜುಳಾ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಗಳು ಆತ್ಮಸ್ಥೈರ್ಯ, ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕಿದೆ. ಇದು ವಿದ್ಯಾರ್ಥಿ ನಂತರದ ಜೀವನಕ್ಕೆ ಸಹಕಾರಿಯಾಗಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಪ್ರಾದೇಶಿಕ ಕಚೇರಿ ಜಂಟಿ ನಿರ್ದೇಶಕ ಪ್ರೊ. ಎಸ್.ಬಿ. ಅಪ್ಪಾಜಿಗೌಡ ಮಾತನಾಡಿ, ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಭಾಷೆ ಮತ್ತು ಕಂಪ್ಯೂಟರ್ ಜ್ಞಾನ ಅತ್ಯವಶ್ಯಕ. ವಿದ್ಯಾರ್ಥಿಗಳು ನಿಂತ ನೀರಾಗದೆ ಬದಲಾವಣೆಗಳಿಗೆ ತಕ್ಕಂತೆ ತಮ್ಮನ್ನು ತಯಾರು ಮಾಡಿಕೊಳ್ಳಬೇಕಿದೆ. ಈ ಮೂಲಕ ಯಶಸ್ಸು ಪಡೆದುಕೊಳ್ಳಲು ಸಾಧ್ಯ ಎಂದು ಸಲಹೆ ನೀಡಿದರು.

ಕಾಲೇಜು ಪ್ರಾಂಶುಪಾಲ ಪ್ರೊ. ಹೆಚ್.ಬಿ. ಲಿಂಗಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ವಿದ್ಯಾರ್ಥಿ ಸಮಿತಿ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು. ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಣೆ ನಡೆಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಪ್ರೊ. ಹೆಚ್.ಕೆ. ಕೇಶವಯ್ಯ, ಕಾಲೇಜಿನ ವಿವಿಧ ಸಮಿತಿಗಳ ಸಂಚಾಲಕರಾದ ಪಿ.ಟಿ. ಕಾಶಿಕುಮಾರ್, ವಸಂತಕುಮಾರಿ, ಡಾ. ಹರ್ಷ, ಸುರೇಶ್‍ಕುಮಾರ್, ಟಿ.ಎಂ. ಸುಧಾಕರ್, ಎ.ಕೆ. ಕಾವೇರಪ್ಪ, ಸಿ.ಎಸ್. ಪುಟ್ಟರಾಜು, ಪಾವನಿ, ವಿದ್ಯಾರ್ಥಿ ಸಮಿತಿ ಉಪಾಧ್ಯಕ್ಷ ಆರ್. ಮಧು, ಕಾರ್ಯದರ್ಶಿ ಪುಷ್ಪಕುಮಾರ್ ಸೇರಿದಂತೆ ಪದಾಧಿಕಾರಿಗಳು, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.

ಶನಿವಾರಸಂತೆ: ಶನಿವಾರಸಂತೆ ಸಮೀಪದ ಆಲೂರು-ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ವೀರಾಜಪೇಟೆಯ ಸೆಂಟೆನ್ಸ್ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕರ ಖೋ-ಖೋ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ಅಲೋಕ್ ಚಿತ್ರದಲ್ಲಿ ಇದ್ದಾರೆ.

ವೀರಾಜಪೇಟೆ: ಭಾರತವು ಇಡೀ ಜಗತ್ತಿನಲ್ಲಿಯೇ ಅತ್ಯಂತ ಬಲಿಷ್ಠ ಆರ್ಥಿಕ ಶಕ್ತಿಯಾಗಿದೆ ಎಂದು ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಕೆ.ಜಿ. ಹರೀಶ್ ಅಭಿಪ್ರಾಯಪಟ್ಟರು.

ವೀರಾಜಪೇಟೆ ನಗರದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದಿಂದ ನಡೆಸಲಾದ “ಭಾರತದ ಪ್ರಸ್ತುತದ ಆರ್ಥಿಕತೆ” ಎಂಬ ವಿಚಾರದ ಬಗ್ಗೆ ವಿಚಾರವನ್ನು ಮಂಡಿಸಿದರು. ಭಾರತವು ಇಂದು ವಿಶ್ವಮಟ್ಟದಲ್ಲಿ ಮನ್ನಣೆಯನ್ನು ಗಳಿಸಿದೆ. ಮಾತ್ರವಲ್ಲದೇ ವಿದೇಶಿ ನೇರ ಹೂಡಿಕೆಯ ಗಾತ್ರವು ಹೆಚ್ಚಾಗಿದೆ. ಅರ್ಥಶಾಸ್ತ್ರದ ಮೂಲ ತತ್ವಗಳಾದ ಬೇಡಿಕೆ ಮತ್ತು ಪೂರೈಕೆಗಳ ನಡುವೆ ಸಮತೋಲನ ಏರ್ಪಟ್ಟಾಗ ಮಾತ್ರ ಮರುಕಟ್ಟೆಯ ಸಮತೋಲನವಾಗಲು ಸಾಧ್ಯ ಎಂದರು.

ಕೇಂದ್ರ ಸರ್ಕಾರವು ಜಿ.ಎಸ್.ಟಿ. ತೆರಿಗೆಯ ದರವನ್ನು ಕಡಿಮೆ ಮಾಡಿ ಪಂಚಸೂತ್ರವನ್ನು ರೂಪಿಸಿದೆ, ಭಾರತದ ಆರ್ಥಿಕತೆಯು 1991ರ ನೂತನ ಆರ್ಥಿಕ ನೀತಿಗಳಿಂದ ಬಲಿಷ್ಠವಾಗಿದೆ ಮಾತ್ರವಲ್ಲದೇ ಅವರು ಬಂಡವಾಳ ಹೂಡಿಕೆ, ವ್ಯಾಪಾರ, ಬ್ಯಾಂಕುಗಳ ರಾಷ್ಟ್ರೀಕರಣ, ನಿರುದ್ಯೋಗ ತಡೆಯ ಬಗ್ಗೆಯು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಎ.ಫಾ. ರೋನಿ ರವಿಕುಮಾರ್ ಮಾತನಾಡಿ, ಅರ್ಥಶಾಸ್ತ್ರವು ಸಾಮಾಜಿಕ ವಿಜ್ಞಾನಗಳ ರಾಣಿಯಾಗಿದೆ. ಅರ್ಥಶಾಸ್ತ್ರದ ಅಧ್ಯಯನ ದೇಶದ ಸಮಸ್ತ ಆರ್ಥಿಕತೆಯನ್ನು ಅಭಿವೃದ್ಧಿ ಪಥದತ್ತ ಕೊಂಡ್ಯೊಯುತ್ತದೆ. ಮಾತ್ರವಲ್ಲದೇ ಅರ್ಥಶಾಸ್ತ್ರ ವಿಶಾಲ, ಸಂಕ್ಷಿಪ್ತ ಅಧ್ಯಯನ ವಿಷಯವಾಗಿದೆ. ಒಂದು ದೇಶ ಎಲ್ಲಾ ರೀತಿಯಲ್ಲಿಯೂ ಅಭಿವೃದ್ಧಿಯಾಗಲು ಆರ್ಥಿಕತೆ ಒಂದು ಮೂಲ ಅತ್ಯಗತ್ಯ ಅಂಶ. ವಿಶ್ವ ಮಟ್ಟದಲ್ಲಿ ಭಾರತವು ಗುರುತಿಸಿಕೊಳ್ಳಲು ಬೆಳೆವಣಿಗೆಯ ಆರ್ಥಿಕತೆಯೇ ಕಾರಣವಾಗಿದೆ, ವೇದಗಳ ಕಾಲದಿಂದಲೂ ಅರ್ಥಶಾಸ್ತ್ರಕ್ಕೆ ಸಾಮಾಜಿಕವಾದ ಮನ್ನಣೆ ಇತ್ತು. ಇಂದಿನ ಆಧುನಿಕ ಯುಗದಲ್ಲೂ ಅದು ನಿರಂತರವಾಗಿ ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ ಎಂದರು.

ವೇದಿಕೆಯಲ್ಲಿ ಕಾರ್ಯಕ್ರಮದ ಆಯೋಜಕರಾದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಬಿ.ಎನ್. ಶಾಂತಿಭೂಷಣ್, ಸಹಾಯಕ ಪ್ರಾಧ್ಯಾಪಕ ಪ್ರಮೋದ್ ಹಾಜರಿದ್ದರು. ಪ್ರಮೋದ್ ಸ್ವಾಗತಿಸಿ, ವಿದ್ಯಾರ್ಥಿನಿ ಸಮನ್ ನಿರೂಪಿಸಿ, ವಿಸ್ಮಿತಾ ಮತ್ತು ತಂಡದವರು ಪ್ರಾರ್ಥಿಸಿ, ವಿದ್ಯಾರ್ಥಿನಿ ಸಾಯ ವಂದಿಸಿದರು.

ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗದ 400ಕ್ಕೂ ಆರ್ಥಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಕುಶಾಲನಗರ: ಯಾವದೇ ಭಾಷೆಯು ನಿರ್ಲಕ್ಷ್ಯಕ್ಕೆ ಒಳಗಾಗದಂತೆ ಪ್ರತಿಯೊಬ್ಬರೂ ಭಾಷೆಯ ಮೇಲೆ ಅಭಿಮಾನ ಹೊಂದುವಂತಾಗಬೇಕು ಎಂದು ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಜೀವರಸಾಯನಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಚಂದ್ರಶೇಖರ್ ಜಿ. ಜೋಷಿ ಹೇಳಿದರು.

ಚಿಕ್ಕ ಅಳುವಾರದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿನ ಕನ್ನಡ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ಸಂಘ ಉದ್ಘಾಟಿಸಿ ಮಾತನಾಡಿದ ಅವರು, ಭಾಷೆ ನಾಶವಾದರೆ ಒಂದು ಪ್ರದೇಶದ ಸಂಸ್ಕøತಿ ನಾಶವಾದಂತೆ. ಭಾಷೆಯ ಬಗ್ಗೆ ಕೀಳರಿಮೆಯ ಮನೋಭಾವವಿರಬಾರದು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಪ್ರಭಾರ ನಿರ್ದೇಶಕಿ ಪ್ರೊ. ಮಂಜುಳಾ ಶಾಂತರಾಮ್, ಕನ್ನಡ ಸುಂದರ ಭಾಷೆಯಾಗಿದ್ದು ಭಾಷೆಗಳ ಕಲಿಕೆಯ ಬಗ್ಗೆ ಪ್ರೀತಿ, ಆಸಕ್ತಿ ಮತ್ತು ಕುತೂಹಲ ಇರಬೇಕು. ಕನ್ನಡ ಭಾಷೆಯ ಕಲಿಕೆಯಿಂದ ಪತ್ರಿಕೋದ್ಯಮಗಳಲ್ಲಿ ವಿಫುಲವಾದ ಅವಕಾಶವಿದೆ ಎಂದರು.

ಕನ್ನಡ ವಿಭಾಗದ ಉಪನ್ಯಾಸಕರುಗಳಾದ ಕೆ.ಎಸ್. ಶ್ರೀನಿವಾಸ್, ಡಾ. ಮಹಂತೇಶ ಪಾಟೀಲ, ಅರ್ಪಿತಾ ಹಾಗೂ ಜûಮೀರ್ ಅಹಮದ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಯೋಗಿಕ್ ಸೈನ್ಸ್‍ನ ಸಹಾಯಕ ಪ್ರಾಧ್ಯಾಪಕ ಡಾ. ಶ್ಯಾಮಸುಂದರ್, ಸಹಾಯಕ ಗ್ರಂಥಪಾಲಕ ಹರೀಶ್, ವಿವಿಧ ವಿಭಾಗಗಳ ಪ್ರಾಧ್ಯಾಪಕರು ಮತ್ತು ಉಪನ್ಯಾಸಕರು, ಆಡಳಿತ ವರ್ಗ, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಇದ್ದರು.

ಶನಿವಾರಸಂತೆ: ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮತದಾರಪಟ್ಟಿ ಪರಿಶೀಲನಾ ಜಾಗೃತಿ ಜಾಥಾ ನಡೆಸಿದರು.

ಕೂಡಿಗೆ: ಮನುಷ್ಯನಿಗೆ ಜ್ಞಾನದ ಬೆಳಕನ್ನು ತೋರಿಸಿರುವ ಸಂವಿಧಾನದ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಶಿಕ್ಷಣದಿಂದ ಯಾರೂ ವಂಚಿತರಾಗಬಾರದು, ಮೇಲು ಕೀಳು ಎಂಬ ಕೀಳರಮೆಯನ್ನು ತೊಡೆಯಲು ಶ್ರಮಿಸಿದ ಮಹಾನ್ ವ್ಯಕ್ತಿ. ಇಂತಹ ವ್ಯಕ್ತಿಯ ವಿಚಾರಗಳನ್ನು ನಾವೆಲ್ಲ ಇಂದು ತಿಳಿಯಬೇಕು ಎಂದು ಶಿರಂಗಾಲ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸೋಮಯ್ಯ ಹೇಳಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶಿರಂಗಾಲ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುಸ್ತಕ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವೆಲ್ಲರೂ ಅವರ ಚರಿತ್ರೆಯನ್ನು ಓದಬೇಕು. ವಿದ್ಯಾರ್ಥಿಗಳು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ತಿಳಿಯಬೇಕಾದರೆ ಅವರ ಪುಸ್ತಕಗಳನ್ನು ಹೆಚ್ಚು ಹೆಚ್ಚು ಓದುವದು ಅಗತ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪನ್ಯಾಸಕ ಹೆಚ್.ಆರ್. ಶಿವಕುಮಾರ್ ಮಾತನಾಡಿ, ಅಂಬೇಡ್ಕರ್ ಅವರ ಪುಸ್ತಕವನ್ನು ಓದುವದರ ಮೂಲಕ ಹೆಚ್ಚು ವಿಷಯವನ್ನು ತಿಳಿದು ಪರಿಪೂರ್ಣ ವ್ಯಕ್ತಿತ್ವ ಬೆಳೆಸಿಕೊಳ್ಳಲು ಸಹಕಾರಿಯಗುತ್ತದೆ. ರಾಷ್ಟ್ರಕ್ಕೆ ಮಾದರಿಯಾದ ಸಂವಿಧಾನವನ್ನು ರಚಿಸಿದ ಕೀರ್ತಿ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಸಮಾನತೆಯನ್ನು ಸಾರಿದ ಅಂಬೇಡ್ಕರ್ ನಮಗೆಲ್ಲ ಆದರ್ಶವಾಗಿದ್ದಾರೆ. ಇಂತಹ ಮಹನೀಯರ ಚರಿತ್ರೆಯನ್ನು ನಾವೆಲ್ಲ ತಿಳಿದುಕೊಳ್ಳುವದು ಅಗತ್ಯ ಎಂದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯಯ ಅಧಿಕಾರಿ ಮಣಜೂರು ಮಂಜುನಾಥ್ ಅಂಬೇಡ್ಕರ್ ಅವರ ವಿಚಾರಧಾರೆ, ಬರಹ ಭಾಷೆಗಳನ್ನು ತಿಳಿಸಲು ಕಾಲೇಜು ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಹೇಮಲತಾ, ಪಲ್ಲವಿ, ಸುಚಿತ್ರ, ವೀಣಾ, ಆದರ್ಶ ಇದ್ದರು.

ಕಾರ್ಯಕ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಗೀತಗಾಯನ ಏರ್ಪಡಿಸಲಾಗಿತ್ತು.

ಸೋಮವಾರಪೇಟೆ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ದೇಶಭಕ್ತಿಗೀತೆ ಮತ್ತು ಮಕ್ಕಳ ಛದ್ಮವೇಷ ಸ್ಪರ್ಧಾ ವಿಜೇತರಿಗೆ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.

ದೇಶ ಭಕ್ತಿಗೀತೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕೆ.ಎಸ್. ಸುದೀಕ್ಷಾ ಪ್ರಥಮ, ಕೆ.ಎಸ್. ಸಮೀಕ್ಷಾ ಹಾಗೂ ವಿದ್ಯಾಲಕ್ಷ್ಮೀ ದ್ವಿತೀಯ ಮತ್ತು ಜಿ. ಸೋನಾ ತೃತೀಯ ಸ್ಥಾನವನ್ನು ಗಳಿಸಿದರು.

ಪ್ರೌಢಶಾಲಾ ವಿಭಾಗದಲ್ಲಿ ಸಿ.ಪಿ. ಶ್ರೀಲಕ್ಷ್ಮಿ (ಪ್ರ), ಎಸ್. ಸುಧನ್ವ (ದ್ವಿ), ಕೆ.ವಿ. ಮಾನ್ಸಿ (ತೃ), ಸಾರ್ವಜನಿಕ ವಿಭಾಗದಲ್ಲಿ ಪುರುಷೋತ್ತಮ್ (ಪ್ರ), ರೂಪ ಗಿರೀಶ್ (ದ್ವಿ), ಅರ್ಚನಾ ಶ್ರೀಕಾಂತ್ (ತೃ) ಸ್ಥಾನಗಳಿಸಿದರು.

ಛದ್ಮವೇಷ ಸ್ಪರ್ಧೆಯ 1 ರಿಂದ 3 ವರ್ಷದ ವಿಭಾಗದಲ್ಲಿ ತನ್ವಿ (ಪ್ರ), ಯಾದ್ವಿ (ದ್ವಿ), ತಸ್ಮಯ್ ಮೋಹನ್ (ತೃ), 3 ರಿಂದ 6 ವರ್ಷದ ವಿಭಾಗದಲ್ಲಿ ಡಿಂಪಲ್ (ಪ್ರ), ಆರ್ಯ ಮತ್ತು ಭವಿತಾ (ದ್ವಿ), ಸುಮಂತ್ ತೃತೀಯ ಸ್ಥಾನಗಳಿಸಿದರು.

ತಾಲೂಕು ಕ.ಸಾ.ಪ. ಅಧ್ಯಕ್ಷ ಎಸ್.ಡಿ. ವಿಜೇತ್, ಓ.ಎಲ್.ವಿ. ಚರ್ಚ್‍ನ ಫಾದರ್ ರಾಯಪ್ಪ, ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ತಾ.ಪಂ. ಸದಸ್ಯ ಬಿ.ಬಿ. ಸತೀಶ್ ಬಹುಮಾನ ವಿತರಿಸಿದರು.ಮಡಿಕೇರಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿ ಅರ್ಥಶಾಸ್ತ್ರ ವಿಭಾಗದ ಪ್ರೊ ಅಮಥ್ರ್ಯ ಸೇನ್ ವೇದಿಕೆಯ ವತಿಯಿಂದ ಇತ್ತೀಚೆಗೆ ಕಾಲೇಜು ಆವರಣದಲ್ಲಿ “ಸಮಯ ನಿರ್ವಹಣೆ ಮತ್ತು ಮೆಮೋರಿ ಗೈನ್” ಎಂಬ ವಿಷಯದ ಬಗ್ಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ ಚಿತ್ರಾ ವೈ ವಹಿಸಿದ್ದರು. ಮನೋವೈದ್ಯ ಡಾ.ಗಿರೀಶ್ ವಿದ್ಯಾರ್ಥಿಗಳು ಹೇಗೆ ತಮ್ಮ ಅಮೂಲ್ಯವಾದ ಸಮಯವನ್ನು ನಿರ್ವಹಣೆ ಮಾಡುವ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.

ಪ್ರತಿಯೊಬ್ಬ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ತಾಳ್ಮೆ, ಕಲಿಕ ಮನೋಸ್ಥಿತಿ, ಸರಳತೆ, ಧನಾತ್ಮಕ ಚಿಂತನೆ ಮೊದಲಾದ ಗುಣಗಳನ್ನು ಬೆಳಸಿಕೊಳ್ಳಬೇಕು ಎಂದರು. ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ದಯಾನಂದ ಕೆ.ಸಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂರ್ನಾಡು: ಮೂರ್ನಾಡು ವಿದ್ಯಾಸಂಸ್ಥೆಯ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಅಂತರ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ತಾಲೂಕು ಮಟ್ಟದಲ್ಲಿ ಪ್ರೌಢಶಾಲೆಯ ಬಾಲಕರು ಹಾಕಿ ಪಂದ್ಯಾಟದಲ್ಲಿ ದ್ವಿತೀಯ, ಕಾಲ್ಚೆಂಡು ಪಂದ್ಯಾಟದಲ್ಲಿ ದ್ವಿತೀಯ, ಬಾಲಕಿಯರ ಟೇಬಲ್ ಟೆನ್ನಿಸ್‍ನಲ್ಲಿ ದ್ವಿತೀಯ ಮತ್ತು ಬಾಲಕರ ಟೇಬಲ್ ಟೆನ್ನಿಸ್‍ನಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಪ್ರಾಥಮಿಕ ವಿಭಾಗ ವಿದ್ಯಾರ್ಥಿಗಳು ತಾಲೂಕು ಮಟ್ಟದಲ್ಲಿ ಬಾಲಕಿಯರ ಹ್ಯಾಂಡ್ ಬಾಲ್‍ನಲ್ಲಿ ಪ್ರಥಮ, ಬಾಲಕ ಮತ್ತು ಬಾಲಕಿಯರ ಟೇಬಲ್ ಟೆನ್ನಿಸ್‍ನಲ್ಲಿ ಪ್ರಥಮ, ತಟ್ಟೆ ಎಸೆತದಲ್ಲಿ ಪ್ರಥಮ, ಬಾಲಕರ ರಿಲೆ ಓಟದಲ್ಲಿ ಪ್ರಥಮ, ಜಿಲ್ಲಾ ಮಟ್ಟದಲ್ಲಿ ಬಾಲಕಿಯರು ಟೇಬಲ್ ಟೆನ್ನಿಸ್‍ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಮೂರ್ನಾಡು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೊಕ್ಕಡ ಸುಬ್ರಮಣಿ, ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎ.ಎಸ್. ರಶ್ಮಿ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಸ್.ಡಿ. ಪ್ರಶಾಂತ್, ದೈಹಿಕ ಶಿಕ್ಷಣ ಶಿಕ್ಷಕರಾದ ಎ.ಜಿ. ಗಣೇಶ್, ರಾಕೇಶ್ ಹಾಗೂ ಶಿಕ್ಷಕ ವೃಂದದವರು ಇದ್ದಾರೆ.

ಪೊನ್ನಂಪೇಟೆ: ಪೊನ್ನಂಪೇಟೆ ಸಾಯಿ ಶಂಕರ್ ವಿದ್ಯಾಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿ ಮಹಮದ್ ಸುಯೈಬ್ ಕೆ.ಎ. ಭಾರದ ಗುಂಡು ಎಸೆತ ಮತ್ತು ತಟ್ಟೆ ಎಸೆತಗಳಲ್ಲಿ ಹೋಬಳಿ, ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವತಿಯಿಂದ ಎನ್‍ಎಸ್‍ಎಸ್ ದಿನಾಚರಣೆಯನ್ನು ಆಚರಿಸಲಾಯಿತು.

ಗೋಣಿಕೊಪ್ಪದ ಹಿರಿಯ ವೈದ್ಯರು ಹಾಗೂ ಗೋಣಿಕೊಪ್ಪ ಕಾವೇರಿ ಕಾಲೇಜಿನ ಹಿರಿಯ ಎನ್‍ಎಸ್‍ಎಸ್ ನಾಯಕರಾಗಿದ್ದ ಡಾ. ಕೆ.ಕೆ. ಶಿವಪ್ಪ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಈ ವರ್ಷ ಸುವರ್ಣ ಮಹೋತ್ಸವವನ್ನು ಆಚರಿಕೊಳ್ಳುತ್ತಿರುವ ಎನ್‍ಎಸ್‍ಎಸ್ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಸೇವಾ ಮನೋಭಾವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ವಿದ್ಯಾರ್ಥಿಗಳು ಪರಿಸರದ ಬಗ್ಗೆ ಕಾಳಜಿ ಬೆಳೆಸಿಕೊಂಡು ಪರಿಸರದ ಸಂರಕ್ಷಣೆಯಲ್ಲಿ ಕಾರ್ಯೋನ್ಮುಖರಾಗಿ ಎಂದರು. ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಮಾತನಾಡಿ, ಯಾವದೇ ಒಂದು ವೇದಿಕೆಯಲ್ಲಿ ಧೈರ್ಯದಿಂದ ಮಾತನಾಡುವ ಕಲೆಯನ್ನು ಕಲಿಸುವದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಎಸ್‍ಎಸ್‍ಎಸ್ ಬೆಳೆಸುತ್ತಾ ಬರುತ್ತಿದ್ದು, ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. ಪದವಿ ಕಾಲೇಜು ಪ್ರಾಂಶುಪಾಲರಾದ ಪ್ರೊ. ಕೆ.ವಿ. ಕುಸುಮಾಧರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ. ಎಂ.ಬಿ. ಕಾವೇರಪ್ಪ, ಎನ್‍ಎಸ್‍ಎಸ್ ಅಧಿಕಾರಿಗಳಾದ ಎನ್.ಪಿ. ರೀತಾ, ಎಸ್.ಆರ್. ತಿರುಮಲಯ್ಯ ಇದ್ದರು. - ಚನ್ನನಾಯಕ

ನಾಪೆÇೀಕ್ಲು: ಸುಂಟಿಕೊಪ್ಪದಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಾಪೆÇೀಕ್ಲು ಸಮೀಪದ ಹೊದವಾಡದ ರಾಫೆಲ್ಸ್ ಇಂಟರ್‍ನ್ಯಾಷನಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮೂರ್ನಾಡು: ಜಿಲ್ಲಾಧಿಕಾರಿಯವರ ಆದೇಶದನ್ವಯ ಮೂರ್ನಾಡು ಪದವಿಪೂರ್ವ ಕಾಲೇಜಿನಲ್ಲಿ ಜಂತು ಹುಳು ನಿವಾರಣ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮವನ್ನು ಕಾಂತೂರು-ಮೂರ್ನಾಡು ಗ್ರಾಮ ಪಂಚಾಯತಿ ಸದಸ್ಸ ಮೂಡೆರ ಅಶೋಕ್ ಅವರ ಸಹಯೋಗದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ವೇಣು ಅಪ್ಪಣ್ಣ, ಪ್ರಾಂಶುಪಾಲೆ ದೇವಕ್ಕಿ, ಉಪನ್ಯಾಸಕಿಯರಾದ ದಮಯಂತಿ, ರೋಹಿಣಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕೂಡಿಗೆ: ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಜಂತುಹುಳು ಸೋಂಕನ್ನು ಕಡಿಮೆ ಮಾಡಲು ಎಲ್ಲಾ ಮಕ್ಕಳಿಗೂ ಜಂತುಹುಳು ನಾಶಕ ಮಾತ್ರೆ ನೀಡುವದು ಅವಶ್ಯಕವಾಗಿದೆ. 1 ರಿಂದ 19 ವರ್ಷದ ಒಳಗಿನ ಮಕ್ಕಳಿಗೆ ಉಚಿತವಾಗಿ ಜಂತುಹುಳು ನಿವಾರಣಾ ಮಾತ್ರೆಗಳನ್ನು ಅಂಗನವಾಡಿ ಕೇಂದ್ರಗಳಲ್ಲಿ, ಶಾಲೆಗಳಲ್ಲಿ, ಪದವಿಪೂರ್ವ ಕಾಲೇಜುಗಳಲ್ಲಿ, ಆರೋಗ್ಯ ಕೇಂ�