ಸೋಮವಾರಪೇಟೆ. ಸೆ. 26: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ ವತಿಯಿಂದ ಉತ್ತಮ ಕಾರ್ಯನಿರ್ವಹಣೆಗಾಗಿ ನೀಡಲಾಗುವ ಪ್ರಥಮ ಬಹುಮಾನವನ್ನು ಪಟ್ಟಣದ ವಿವಿಧೋದ್ದೇಶ ಸಹಕಾರಿ ಬ್ಯಾಂಕ್ ಪಡೆದಿದೆ.
ಮಡಿಕೇರಿಯ ಕೊಡವ ಸಮಾಜದಲ್ಲಿ ನಡೆದ ಕೇಂದ್ರ ಸಹಕಾರಿ ಕೇಂದ್ರ ಬ್ಯಾಂಕ್‍ನ 94ನೇ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್‍ನ ಅಧ್ಯಕ್ಷ ಬಿ.ಪಿ. ಶಿವಕುಮಾರ್ ಅವರು ರೂ. 20 ಸಾವಿರ ನಗದು ಹಾಗೂ ಪ್ರಶಂಸಾ ಪತ್ರ ಸ್ವೀಕರಿಸಿದರು. ಸತತ 2ನೇ ಬಾರಿ ಪ್ರಥಮ ಬಹುಮಾನ ಪಡೆದ ಹೆಗ್ಗಳಿಕೆ ಬ್ಯಾಂಕ್‍ಗೆ ಸಂದಿದೆ. ಈ ಸಂಧರ್ಭ ಜಿಲ್ಲಾ ಕೇಂದ್ರ ಸಹಾಕಾರಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ ನಿರ್ದೇಶಕರುಗಳು ಉಪಸ್ಥಿತರಿದ್ದು, ಪ್ರಶಸ್ತಿ ವಿತರಿಸಿದರು.