ಕುಶಾಲನಗರ, ಸೆ. 28: ಕುಶಾಲನಗರ ಹೃದಯ ಭಾಗದಲ್ಲಿರುವ ಗಣಪತಿ ದೇವಾಲಯಕ್ಕೆ ಸಂಬಂಧಿಸಿದ ವಾಣಿಜ್ಯ ಮಳಿಗೆಗಳನ್ನು ನ್ಯಾಯಾಲಯದ ಆದೇಶದಂತೆ ದೇವಾಲಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಯಿತು. ಕಳೆದ ಕೆಲವು ವರ್ಷಗಳಿಂದ ದೇವಾಲಯ ಸಮಿತಿ ಮತ್ತು ಮಳಿಗೆದಾರರ ನಡುವೆ ವ್ಯಾಜ್ಯ ನಡೆಯುತ್ತಿದ್ದು ಕುಶಾಲನಗರ ಸಿವಿಲ್ ನ್ಯಾಯಾಧೀಶರ ಆದೇಶದಂತೆ ನ್ಯಾಯಾಲಯ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಬಾಡಿಗೆದಾರರಿಂದ ತೆರವುಗೊಳಿಸಿ ದೇವಾಲಯ ಸಮಿತಿ ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು.