ಶನಿವಾರಸಂತೆ, ಸೆ. 27: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2018-19ನೇ ಸಾಲಿನಲ್ಲಿ ಸೋಮವಾರಪೇಟೆ ತಾಲೂಕಿನಲ್ಲಿ ಉತ್ತಮ ಶ್ರೇಣಿಯಲ್ಲಿ ಕಾರ್ಯ ನಿರ್ವಹಿಸಿ ಪ್ರಥಮ ಸ್ಥಾನಗಳಿಸಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನಲ್ಲಿ ನಡೆದ 94ನೇ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಟಿ.ಆರ್. ಗಿರೀಶ್ ಅವರಿಗೆ ನಗದು ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.