ಕೂಡಿಗೆ, ಸೆ. 29: ಕೊಡಗು ಜಿಲ್ಲೆಯ ಮೂರು ಗ್ರಾಮ ಪಂಚಾಯಿತಿಗಳು 2018-19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆಆಯ್ಕೆಗೊಂಡಿವೆ. ಮಡಿಕೇರಿ ತಾಲೂಕಿನ ಗಾಳಿಬೀಡು, ಸೋಮವಾರಪೇಟೆ ತಾಲೂಕಿನ ಕೂಡುಮಂಗಳೂರು ಮತ್ತು ವೀರಾಜಪೇಟೆ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿಗಳು ಗಾಂಧಿ ಗ್ರಾಮ ಪುರಸ್ಕಾರವನ್ನು ಮುಡಿಗೇರಿಸಿಕೊಂಡಿವೆ. ಅಕ್ಟೋಬರ್ 2 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪಡೆದುಕೊಳ್ಳಲಿವೆ.