ಮಡಿಕೇರಿ, ಸೆ. 28: ಸರಕಾರಿ ಪ್ರೌಢಶಾಲೆ ಬೆಸೂರಿನಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ವಿಜಯಮ್ಮ ವಹಿಸಿದ್ದರು. ವಿಜ್ಞಾನ ಶಿಕ್ಷಕಿ ಉಷಾ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ತುಳಸಿಯವರು ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ನಂತರ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಜಂತು ಹುಳು ನಿವಾರಣಾ ಮಾತ್ರೆಯನ್ನು ವಿತರಿಸಲಾಯಿತು.