ಮಡಿಕೇರಿ, ಸೆ. 27: ಮಡಿಕೇರಿ ದಸರಾ ಕ್ರೀಡಾ ಸಮಿತಿ ವತಿಯಿಂದ ತಾ. 29 ರಂದು ಗಾಳಿಬೀಡು ರಸ್ತೆಯಲ್ಲಿರುವ ಪೊಲೀಸ್ ಫೈರ್ ರೇಂಜ್ ಪ್ರದೇಶದಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 9 ಗಂಟೆಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪಿ. ಅವರು ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ ಎಂದು ಮಡಿಕೇರಿ ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಬಿ.ಎಂ.ಹರೀಶ್ ತಿಳಿಸಿದ್ದಾರೆ.

ಸ್ಪರ್ಧೆಯಲ್ಲಿ ಪುರುಷರು ಮತ್ತು ಮಹಿಳೆಯರಿಗಾಗಿ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದ್ದು, 18 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಸ್ಪರ್ಧಿಗಳು ಪೊನ್ನಚ್ಚÀನ ಮಧು ಅವರನ್ನು (ಮೊ. 9880381831) ಸಂಪರ್ಕಿಸಬಹುದಾಗಿದೆ.