ಮಡಿಕೇರಿ, ಸೆ. 28: ನಗರದ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಕೋಟೆ, ಜನರಲ್ ಕೆ.ಎಸ್. ತಿಮ್ಮಯ್ಯ ರಸ್ತೆ ಮತ್ತು ರಾಜಾಸೀಟು ಫೀಡರ್‍ಗಳಲ್ಲಿ ದಸರಾ ಪ್ರಯುಕ್ತ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವದರಿಂದ ಅಕ್ಟೋಬರ್ 1 ರಂದು ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗುವದು. ಆದ್ದರಿಂದ ವಿಜಯನಗರ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ, ಪುಟಾಣಿ ನಗರ, ಮೈಸೂರು ರಸ್ತೆ, ಪೆನ್ಷನ್‍ಲೇನ್, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಕಾಲೇಜು ರಸ್ತೆ, ಜಿಲ್ಲಾಡಳಿತ ಭವನ, ರೇಸ್‍ಕೋರ್ಸ್ ರಸ್ತೆ, ಹೊಸ ಬಡಾವಣೆ, ಎಫ್‍ಎಂಸಿ ಕಾಲೇಜು ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇಖರ್ ತಿಳಿಸಿದ್ದಾರೆ.