ವೀರಾಜಪೇಟೆ, ಸೆ. 28: ತಾಲೂಕು ಕಾನೂನು ಸೇವೆಗಳ ಸಮಿತಿ, ವೀರಾಜಪೇಟೆ ಹಿರಿಯ ನಾಗರಿಕರ ವೇದಿಕೆ, ವಕೀಲರ ಸಂಘ ವೀರಾಜಪೇಟೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 1 ರಂದು ಪಟ್ಟಣದ ಪುರಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ವೀರಾಜಪೇಟೆ ತಾಲೂಕು ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಮುಲ್ಲೇಂಗಡ ಶಂಕರಿ ಪೊನ್ನಪ್ಪ ವಹಿಸಲಿದ್ದಾರೆ. ಸಭೆಯ ಉದ್ಘಾಟನೆಯನ್ನು ಹಿರಿಯ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ಮತ್ತು ಅಧ್ಯಕ್ಷರು, ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಡಿ.ಆರ್. ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಎಂ.ಎಂ. ನಂಜಪ್ಪ, ಹಿರಿಯ ನಾಗರಿಕರ ವೇದಿಕೆ ಸದಸ್ಯ ನಾಯಡ ವಾಸು ನಂಜಪ್ಪ, ವಕೀಲ ಬಿ.ಬಿ. ನಾಣಯ್ಯ, ಬಿ.ಹೆಚ್. ಖಲೀಮುಲ್ಲಾ ಖಾನ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ ಶ್ರೀಧರ್ ಉಪಸ್ಥಿತರಿರುವರು.