ಕುಶಾಲನಗರ, ಸೆ. 29: ಪೋಷಕರು ಮಕ್ಕಳ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸುವ ಪ್ರಯತ್ನ ಮಾಡಬೇಕಾಗಿದೆ ಎಂದು ಪತ್ರಕರ್ತ ಹಾಗೂ ಮಕ್ಕಳ ತಜ್ಞವೈದ್ಯ ಡಾ.ಬಿ.ಸಿ. ನವೀನ್ಕುಮಾರ್ ತಿಳಿಸಿದರು. ಕುಶಾಲನಗರ ಸಮೀಪದ ಕೊಪ್ಪ ಗ್ರಾಮದ ನಳಂದಗುರುಕುಲ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ನಡೆದ ಕಿಂಡರ್ಗಾರ್ಟ್ನ್ ಅಸೆಂಬ್ಲಿ ಪೋಷಕರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಶಾಲೆಯಿಂದ ಮನೆಗೆ ಬಂದ ಮಕ್ಕಳನ್ನು ವಿಚಾರಿಸುವ ಕನಿಷ್ಟ ಗೋಜಿಗೆ ಪೋಷಕರು ಹೋಗುತ್ತಿಲ್ಲ. ತಮ್ಮದೇ ಒತ್ತಡದಲ್ಲಿ ಪೋಷಕರು ಮಕ್ಕಳನ್ನು ಕಡೆಗಣಿಸಿದ ಸಂದರ್ಭ ಮಕ್ಕಳಲ್ಲಿ ಒಂಟಿತನ ಕಾಡುವದರೊಂದಿಗೆ ಅನಾಹುತಗಳಿಗೆ ಎಡೆಮಾಡಿಕೊಡುತ್ತದೆ ಎಂದರು. ಶಿಕ್ಷಣ ವ್ಯವಸ್ಥೆಯೂ ಕೂಡ ಸಮಾಜಮುಖಿಯಾಗಿದ್ದು ಸಮಾಜ ಅಭಿವೃದ್ಧಿಗೆ ಪೂರಕವಾಗಿರಬೇಕು ಎಂದ ಅವರು ಮಕ್ಕಳಲ್ಲಿ ದೇಶ, ಭಾಷೆ, ಸಂಸ್ಕøತಿ ಬಗ್ಗೆ ಅಭಿಮಾನ ಮೂಡಿಸುವಲ್ಲಿ ಪೋಷಕರ ಪಾತ್ರ ಪ್ರಮುಖವಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಸಿ.ಆಂತೋಣಿರಾಜ್ ಮಾತನಾಡಿ ದೇಶದ ಅಭಿವೃದ್ಧಿಯಲ್ಲಿ ಶಾಲೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು.
ವಿದ್ಯಾರ್ಥಿಗಳನ್ನು ತಯಾರು ಮಾಡುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರು ಮತ್ತು ಶಿಕ್ಷಕರ ಮೇಲಿದೆ ಎಂದು ತಿಳಿಸಿದರು.
ಶಾಲಾ ಆಡಳಿತ ಮಂಡಳಿ ನಿರ್ದೇಶಕ ನ್ಯಾಮಗೇಲ್, ಶಿಕ್ಷಕರು ಮತ್ತು ಪೋಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭ ಶಾಲಾ ಆಡಳಿತ ಮಂಡಳಿ ವತಿಯಿಂದ ಡಾ. ಬಿ.ಸಿ. ನವೀನ್ ಕುಮಾರ್ ಅವರನ್ನು ಸನ್ಮಾನಿಸಿ, ಗೌರವಿಸ ಲಾಯಿತು. ಪುಟಾಣಿ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.