ಕುಶಾಲನಗರ, ಸೆ. 29: ಪೌರ ಕಾರ್ಮಿಕ ದಿನಾಚರಣೆ ಅಂಗವಾಗಿ ಕುಶಾಲನಗರದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಮುಖ್ಯಾಧಿಕಾರಿ ಸುಜಯ್ಕುಮಾರ್ ಚಾಲನೆ ನೀಡಿದರು.
ಪೌರ ಕಾರ್ಮಿಕರ ದಿನಾಚರಣೆ ಹಿನ್ನೆಲೆ ನಡೆದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಮುಖ್ಯ ಅತಿಥಿ ಶಿಕ್ಷಕ ಉ.ರಾ. ನಾಗೇಶ್ ಬಹುಮಾನ ವಿತರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಆರೋಗ್ಯಾಧಿಕಾರಿ ಎಂ.ಸಿ. ಉದಯ್ ಮತ್ತು ದಫೇದಾರ್ ಕುಮಾರ್ ಹಾಗೂ ಪೌರಕಾರ್ಮಿಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭ ಪಟ್ಟಣ ಪಂಚಾಯಿತಿ ಸದಸ್ಯರಾದ ಜಯವರ್ಧನ, ಜಯಲಕ್ಷ್ಮಿ, ಸುರೇಶ್, ರೂಪಾ ಉಮಾಶಂಕರ್, ಸುರಯ್ಯಭಾನು ಮತ್ತಿತರರು ಇದ್ದರು.