ಕೂಡಿಗೆ, ಸೆ. 29: ಕೂಡಿಗೆ- ಕುಶಾಲನಗರ ರಾಜ್ಯ ಹೆದ್ದಾರಿ ರಸ್ತೆಯ ಅಗಲೀಕರಣ ಮತ್ತು ಅಪಘಾತ ಸ್ಥಳ ಎಂದು ಗುರುತಿಸಲ್ಪಟಿರುವ ರಸ್ತೆಯ ಅಭಿವೃದ್ಧಿ ಮತ್ತು ದ್ವಿಪಥ ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಿದರು.ನಂತರ ಮಾತನಾಡಿದ ಅವರು, ಕೂಡಿಗೆ ಕುಶಾಲನಗರ ರಾಜ್ಯ ಹೆದ್ದಾರಿಯ ಅಗಲೀಕರಣ ಮತ್ತು ಅಪಘಾತ ಸ್ಥಳ ಎಂದು ಗುರುತಿಸಲ್ಪಟಿರುವ ಮೂರು ಸ್ಥಳದಲ್ಲಿ ರಸ್ತೆಯ ಮಧ್ಯೆ ಕಟ್ಟೆ ನಿರ್ಮಾಣ ಹಾಗೂ ಅಭಿವೃದ್ಧಿ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯ ಮೂಲಕ 4 ಕೋಟಿ 50 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ಮಾಡಲಾಗಿದೆ ಎಂದರಲ್ಲದೆ ಕಾಮಗಾರಿಯ ಗುಣಮಟ್ಟವನ್ನು ಕಾಪಾಡಿ ಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದÀರ್ಭ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೇಮಲೀಲಾ, ಉಪಾಧ್ಯಕ್ಷ ಗಿರೀಶ್ ಕುಮಾರ್, ಅರ್‍ಎಂಸಿ ಮಾಜಿ ಅಧ್ಯಕ್ಷ ಎಂ.ಬಿ. ಜಯಂತ, ತಾಲೂಕು ಬಿಜೆಪಿ ಉಪಾಧ್ಯಕ್ಷ ಕೆ.ಕೆ. ಬೋಗಪ್ಪ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಪೀಟರ್, ಗ್ರಾಮಸ್ಥರು ಹಾಜರಿದ್ದರು.