ಮಡಿಕೇರಿ, ಸೆ. 29: ಪರಿಶಿಷ್ಟ ಪಂಗಡದ ಕಲ್ಯಾಣ ಇಲಾಖಾ ವತಿಯಿಂದ ಮೂಲನಿವಾಸಿ ಜನಾಂಗದವರ ಅಭಿವೃದ್ಧಿ ಯೋಜನೆಯಡಿ ಮೂಲನಿವಾಸಿ ಜೇನುಕುರುಬ ಜನಾಂಗದ ನಿರುದ್ಯೋಗಿ ಯುವಕರಿಗೆ ಲೈಫ್ ಸೇವಿಂಗ್ ಟೆಕ್ನಿಕ್-ವಾಟರ್ ಸ್ಪೋಟ್ರ್ಸ್ ಆಪರೇಟರ್ ಹಾಗೂ ವೈಟ್-ವಾಟರ್ ರಿವರ್ ರ್ಯಾಫ್ಟಿಂಗ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಜೇನುಕುರುಬ ಅಭ್ಯರ್ಥಿಗಳು ಅರ್ಜಿಯನ್ನು ಕಚೇರಿ ವೇಳೆಯಲ್ಲಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ (08274-261261) ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-2) ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ (08276-281115) ಇಲ್ಲಿಗೆ ಅಕ್ಟೋಬರ್ 11 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.