ವೀರಾಜಪೇಟೆ, ಸೆ. 29: ಮನುಷ್ಯ ಆರೋಗ್ಯವಂತನಾಗಿದ್ದರೆ ಎಲ್ಲವೂ ಇದ್ದಂತೆ ಎಂದು ಶಾಸಕ ಕೆ.ಜಿ. ಬೋಪಯ್ಯ ಅಭಿಪ್ರಾಯಪಟ್ಟರು.
ವೀರಾಜಪೇಟೆ ಪುರಭವನದಲ್ಲಿ ನಡೆದ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯ ಪಾಕ್ಷಿಕ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಯೋಜನೆಯನ್ವಯ ಬಿ.ಪಿ.ಎಲ್. ಕಾರ್ಡುದಾರರಿಗೆ ರೂ. 5 ಲಕ್ಷ ಹಾಗೂ ಎ.ಪಿ.ಎಲ್. ಕಾರ್ಡುದಾರರಿಗೆ ರೂ. 1.5 ಲಕ್ಷ ನಷ್ಟು ಚಿಕಿತ್ಸಾ ವೆಚ್ಚವನ್ನು ಸರಕಾರದಿಂದ ಭರಿಸಲಾಗುತ್ತದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಮೂಕೊಂಡ ಶಶಿ ಸುಬ್ರಮಣಿ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ಕಾಂiÀರ್i ನಿರ್ವಹಿಸುವ ದಾದಿಯರು ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಪ್ರತಿಯೊಂದು ಕುಟುಂಬಕ್ಕೂ ಯೋಜನೆ ಬಗ್ಗೆ ಮಾಹಿತಿ ನೀಡಬೇಕು. ಇದರಿಂದ ಗ್ರಾಮೀಣ ಪ್ರದೇಶದ ಜನತೆಯೂ ಯೋಜನೆಯ ಲಾಭ ಪಡೆಯುವಂತಾಗುತ್ತದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಮಾತನಾಡಿದರು. ಡಾ. ಗಿರಿಧರ್ ಪ್ರ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ವೀರಾಜಪೇಟೆಯ ಸಾರ್ವಜನಿಕ ಆಸ್ವತ್ರೆಯ ವೈದ್ಯಾಧಿಕಾರಿ ಡಾ. ವಿಶ್ವನಾಥ್ ಸಿಂಪಿ ಉಪಸ್ಥಿತರಿದ್ದರು. ಸಭೆಗೆ ಮೊದಲು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಪಾಕ್ಷಿಕ ಆಚರಣೆಯ ಅಂಗವಾಗಿ ದಾದಿಯರು, ವೈದ್ಯರು, ಆಸ್ಪತ್ರೆ ಸಿಬ್ಬಂದಿ ಹಾಗೂ ಸಾರ್ವಜನಿಕರಿಂದ ಜಾಥಾ ಹಮ್ಮಿಕೊಳ್ಳಲಾಗಿತ್ತು.