ಮಡಿಕೇರಿ, ಸೆ. 29: ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ವತಿಯಿಂದ ಅ.5 ರಂದು ಅವಲೋಕನ ಎಂಬ ವಿಜ್ಞಾನ ಮೇಳ ಆಯೋಜಿತವಾಗಿದೆ.

ಮಡಿಕೇರಿಯ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ಆವರಣದಲ್ಲಿ ಅ. 5 ರಂದು ಬೆಳಿಗ್ಗೆ 10 ಗಂಟೆಗೆ ಆಯೋಜಿತ ವಿಜ್ಞಾನ ಮೇಳವನ್ನು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಉದ್ಘಾಟಿಸಲಿದ್ದು, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಪಾಲ್ಗೊಳ್ಳಲಿದ್ದಾರೆ.

ರಕ್ತದಾನ ಶಿಬಿರ, ಆರೋಗ್ಯ ತೀನಿ, ಮೆಹಂದಿ, ಯೋಗ, ರೋಬೋಟಿಕ್ಸ್, ಮ್ಯಾಜಿಕ್, ಪ್ರಾಚೀನ ವಸ್ತುಗಳ ಪ್ರದರ್ಶನ, ಸ್ಥಿರ ವಿಜ್ಞಾನ ಮಾದರಿಗಳು, ಮತ್ತಿತರ ವೈವಿಧ್ಯಮಯ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ವಿವಿಧ ಶಾಲಾ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ಪ್ರಕಟಣೆ ತಿಳಿಸಿದೆ.