ಶನಿವಾರಸಂತೆ, ಸೆ. 29: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳ್ಳೂರು ಇಲ್ಲಿ ಜಂತುಹುಳು ನಿರ್ಮೂಲನ ದಿನ ಮತ್ತು ಪೋಷಣ್ ಅಭಿಯಾನ ಕಾರ್ಯಕ್ರಮ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ. ಸುಪರ್ಣ ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ ಆಲೂರು-ಸಿದ್ದಾಪುರ ವಿದ್ಯಾರ್ಥಿಗಳಿಗೆ ಜಂತುಹುಳುಗಳು ಹೇಗೆ ದೇಹ ಪ್ರವೇಶಿಸುತ್ತದೆ ಹಾಗೂ ಇದರಿಂದ ದೇಹದಲ್ಲಿ ಏನೆಲ್ಲಾ ದುಷ್ಪರಿಣಾಮಗಳು ಉಂಟಾಗುತ್ತದೆ ಎಂಬದನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಕಾರ್ಯಕರ್ತೆ ಸ್ವಾತಿ, ಮುಖ್ಯ ಶಿಕ್ಷಕ ಮಂಜುನಾಥ್, ಸತೀಶ, ರೋಟರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.