ಕುಶಾಲನಗರ, ಸೆ. 29: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸ್ಥಳೀಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕøತಿಕ ಸೌರಭ ಕಾರ್ಯಕ್ರಮ ನಡೆಯಿತು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಾಹಿತ್ಯ, ಸಾಂಸ್ಕøತಿಕ ಅಭಿರುಚಿಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ನಿವೃತ್ತ ಉಪನ್ಯಾಸಕ ಸಬಲಂ ಭೋಜಣ್ಣ ರೆಡ್ಡಿ ಮಾತನಾಡಿ, ಕಲೆ, ಸಾಹಿತ್ಯ, ಸಂಸ್ಕøತಿಯ ತವರೂರಾದ ಭಾರತ ಸಾಂಸ್ಕøತಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಹೊಂದಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಪ್ರೊ. ಹೆಚ್.ಬಿ. ಲಿಂಗಮೂರ್ತಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿ ಮಣಜೂರು ಮಂಜುನಾಥ್ ಪ್ರಾಸ್ತಾವಿಕ ನುಡಿಗಳಾಡಿದರು.
ಸೋಮವಾರಪೇಟೆ ತಾಲೂಕು ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪಿ. ಮಹದೇವಪ್ಪ, ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಎಂ.ಡಿ. ಕೃಷ್ಣಪ್ಪ, ಕಾಲೇಜಿನ ಉಪನ್ಯಾಸಕರುಗಳಾದ ಡಾ. ಹರ್ಷ, ಪಿ.ಟಿ. ಕಾಶಿಕುಮಾರ್, ವಸಂತಕುಮಾರಿ ಇದ್ದರು.
ಸಾಂಸ್ಕøತಿಕ ಸೌರಭ ಕಾರ್ಯಕ್ರಮದಲ್ಲಿ ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ, ಡೊಳ್ಳು ಕುಣಿತ, ಕಂಸಾಳೆ, ಕೋಲಾಟ ಮೊದಲಾದ ಜಾನಪದ ಕಲೆಗಳ ಅನಾವರಣ ನಡೆಯಿತು.