ಶನಿವಾರಸಂತೆ, ಸೆ. 30: ದುಂಡಳ್ಳಿ ಗ್ರಾಮ ಪಂಚಾಯಿತಿಯ 2ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ (ಕೆಡಿಪಿ) ತಾ 1 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ದುಂಡಳ್ಳಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಪಂಚಾಯಿತಿ ಅಧ್ಯಕ್ಷ ಸಿ.ಜೆ. ಗಿರೀಶ್ ವಹಿಸಲಿರುವರು ಎಂದು ಪಂಚಾಯಿತಿ ಕಾರ್ಯದರ್ಶಿ ವೇಣುಗೋಪಾಲ್ ತಿಳಿಸಿದ್ದಾರೆ.