ಸುಂಟಿಕೊಪ್ಪ, ಸೆ. 30: ಪದವಿ ಪೂರ್ವ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ ಸರಕಾರಿ ಪದವಿ ಪೂರ್ವ ಕಾಲೇಜು ಸುಂಟಿಕೊಪ್ಪ ಮತ್ತು ಸಂತಮೇರಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವು ತಾ. 3 ಹಾಗೂ 4 ರಂದು ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಕೂಡಿಗೆ ಕ್ರೀಡಾ ಶಾಲಾ ಮೈದಾನದಲ್ಲಿ ನಡೆಯಲಿದೆ.