ಶನಿವಾರಸಂತೆ, ಅ. 1: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕರ್ನಾಟಕ ಸರಕಾರ, ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಶನಿವಾರಸಂತೆ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಸ್ವಚ್ಛ ಮೇವ ಜಯತೇ ಕಲಾ ಜಾಥಾ ಅಂಗವಾಗಿ ಬೀದಿ ನಾಟಕವನ್ನು ಶನಿವಾರಸಂತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಸ್ ನಿಲ್ದಾಣದಲ್ಲಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಜೆ. ಮೇದಪ್ಪ ತಮಟೆ ಬಾರಿಸುವದರ ಮೂಲಕ ಉದ್ಘಾಟಿಸಿದರು. ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾ ವೇದಿಕೆಯ ಈ ರಾಜು ತಂಡ ನಾಟಕ ಪ್ರದರ್ಶಿಸಿತು.