ಕೂಡಿಗೆ, ಅ.1 : ಮುಳ್ಳುಸೋಗೆ ಗ್ರಾ.ಪಂ. ಲೆಕ್ಕ ಪರಿಶೋಧನಾ ಗ್ರಾಮ ಸಭೆಯು ತಾ. 5ರಂದು ಬೆಳಿಗ್ಗೆ 11 ಗಂಟೆಗೆ ಭವ್ಯ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.

ಸಭೆಯಲ್ಲಿ ನೋಡೆಲ್ ಅಧಿಕಾರಿ ಹೇಮಂತ್ ಕುಮಾರ್ ಹಾಗೂ ಮುಖ್ಯ ಅತಿಥಿಗಳಾಗಿ ಜಿ.ಪಂ. ಸದಸ್ಯೆ ಕೆ.ಆರ್. ಮಂಜುಳಾ, ತಾ.ಪಂ ಸದಸ್ಯೆ ಆರ್.ಪುಷ್ಪಾ, ಉಪಾಧ್ಯಕ್ಷ ಕೆ.ಆರ್. ತಾರನಾಥ್ ಅವರು ಭಾಗವಹಿಸಲಿದ್ದಾರೆ ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ತಿಳಿಸಿದ್ದಾರೆ.