ಮಡಿಕೇರಿ, ಅ. 1: ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ತಾ. 16 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರು ತಿಳಿಸಿದ್ದಾರೆ.