ಮಡಿಕೇರಿ, ಅ. 1: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಇತರ ಸಮುದಾಯದ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳಲು ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಅಂತಿಮ ದಿನಾಂಕವನ್ನು ತಾ. 10 ರವರೆಗೆ ವಿಸ್ತರಿಸಲಾಗಿದೆ. ಯಾತ್ರಾರ್ಥಿಗಳು ಇಲಾಖಾ ವೆಬ್ಸೈಟ್ತಿತಿತಿ.sತಿ.ಞಚಿಡಿ.ಟಿiಛಿ.iಟಿನಲ್ಲಿ ಅರ್ಜಿಗಳನ್ನು ಸಲ್ಲಿಸಿ ದಾಖಲಾತಿಗಳನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿಗೆ ಸಲ್ಲಿಸಬಹುದಾಗಿದೆ.
ಯಾತ್ರಾರ್ಥಿಗಳ ಆಯ್ಕೆ ವಿಧಾನ: ದೀಕ್ಷಾಭೂಮಿ ನಾಗಪುರಕ್ಕೆ ಹೋಗಬಯಸುವ ಯಾತ್ರಾರ್ಥಿಗಳು ಜಂಟಿ-ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರಿಗೆ ತಾ. 10 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವದು. ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ ಜಿಲ್ಲಾವಾರು ಗುರಿಗೆ ಅನುಗುಣವಾಗಿ ತಾ. 15 ರೊಳಗೆ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಿ ಜಿಲ್ಲಾಧಿಕಾರಿಯವರ ಅನುಮೋದನೆ ಪಡೆದು ಆಯ್ಕೆಯಾದ ಯಾತ್ರಾರ್ಥಿಗಳಿಗೆ ಮಾಹಿತಿ ನೀಡುವದು. ಜಿಲ್ಲಾವಾರು ನಿಗದಿತ ಗುರಿಗಿಂತ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಲ್ಲಿ ವಯಸ್ಸಿನ ಜೇಷ್ಠತೆ ಆಧಾರದ ಮೇಲೆ ಆಯ್ಕೆ ಮಾಡುವದು.
ಯಾತ್ರಾರ್ಥಿಗಳು ಬಿಪಿಎಲ್ ಕಾರ್ಡ್ ಹೊಂದಿರಬೇಕು. ಕಡ್ಡಾಯವಾಗಿ ಆಧಾರ್ ಕಾರ್ಡ್ ಹೊಂದಿರಬೇಕು. ಎಸ್ಸಿ-ಎಸ್ಟಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರ ಸಮುದಾಯದ ಜನರು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು. ಯಾತ್ರಾರ್ಥಿಗಳಿಗೆ ಕನಿಷ್ಟ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು. ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು ಈ ಸೌಲಭ್ಯಕ್ಕೆ ಅರ್ಹರಲ್ಲ. ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ. ರಾಜ್ಯದಲ್ಲಿ ಆಯಾಯ ಜಿಲ್ಲೆಗಳಿಂದಲೇ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಭರಿಸಲಾಗುವದು ವಸತಿ ಮತ್ತು ಭೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ-08272-225531. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.