ಮಡಿಕೇರಿ, ಸೆ. 30: ಅರೆಕಾಲಿಕ ಕಾನೂನು ಸ್ವಯಂ ಸೇವಕರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ನೊಂದವರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸು ವಂತಾಗಬೇಕು. ಪ್ರತಿಯೊಬ್ಬರು ಮಡಿಕೇರಿ, ಸೆ. 30: ಅರೆಕಾಲಿಕ ಕಾನೂನು ಸ್ವಯಂ ಸೇವಕರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ನೊಂದವರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸು ವಂತಾಗಬೇಕು. ಪ್ರತಿಯೊಬ್ಬರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿ, ವಕೀಲರ ಸಂಘ ಮತ್ತು ಮಡಿಕೇರಿ ರೋಟರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ರೋಟರಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ’ ಗುರುತಿನ ಚೀಟಿ ವಿತರಣೆ ಹಾಗೂ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅರೆಕಾಲಿಕ ಕಾನೂನು ಸ್ವಯಂ ಸೇವಕರು ತಮ್ಮ ಕಾರ್ಯದ ಜೊತೆಗೆ ಕಾನೂನಿನ ಬಗ್ಗೆ ಮಾಹಿತಿ ನೀಡಿದಾಗ ಸಮಾಜದಲ್ಲಿ ಅಹಿತಕರ ಘಟನೆಗಳಿಗೆ ಅವಕಾಶ ಇರುವದಿಲ್ಲ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರನ್ನೀಸಾ ಅವರು ಮಾತನಾಡಿ ಅರೆಕಾಲಿಕ ಕಾನೂನು
(ಮೊದಲ ಪುಟದಿಂದ) ಸ್ವಯಂ ಸೇವಕರು ತಮ್ಮ ತಮ್ಮ ಗ್ರಾಮಗಳಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವಂತಾಗಬೇಕು. ಸಮಸ್ಯೆಗಳಿದ್ದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಗಮನಕ್ಕೆ ತರುವಂತಾಗಬೇಕು ಎಂದು ಅವರು ನುಡಿದರು.
ವಕೀಲರ ಸಂಘದ ಅಧ್ಯಕ್ಷರಾದ ಕೆ.ಎಸ್. ಕವನ್ ಮಾತನಾಡಿ ಚುನಾವಣಾ ಗುರುತಿನ ಚೀಟಿಯಂತೆ ಅರೆಕಾಲಿಕ ಕಾನೂನು ಸೇವಾ ಸ್ವಯಂ ಸೇವಕರಿಗೆ ಗುರುತಿನ ಚೀಟಿ ನೀಡಲಾಗುತ್ತದೆ. ಇದನ್ನು ಬಳಸಿಕೊಂಡು ಕಾನೂನಿನ ಬಗ್ಗೆ ತಿಳುವಳಿಕೆ ಮೂಡಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ವಕೀಲ ಎಂ.ಎ. ನಿರಂಜನ್ ಮಾತನಾಡಿ ಪ್ರತಿಯೊಬ್ಬರು ಕಾನೂನಿನ ಜೊತೆಗೆ ಸಾಮಾಜಿಕ ಜವಾಬ್ದಾರಿಯೂ ಅತ್ಯಗತ್ಯ ಎಂಬದನ್ನು ಮರೆಯಬಾರದು ಎಂದರು.
ಪ್ರಮುಖರಾದ ಸುರೇಶ್ ಚಂಗಪ್ಪ ಮಾತನಾಡಿ ಸಮಾಜದಲ್ಲಿ ಪ್ರತಿಯೊಬ್ಬರೂ ಅಭಿವೃದ್ಧಿ ಹೊಂದಬೇಕು. ಶಾಂತಿ, ಸಹನೆ, ಸಹಭಾಳ್ವೆಯಿಂದ ಪ್ರತಿಯೊಬ್ಬರೂ ಬದುಕು ಕಟ್ಟಿಕೊಳ್ಳುವಂತಾಗಬೇಕು ಎಂದರು.
ವಕೀಲರಾದ ಪಿ.ಯು.ಪ್ರೀತಂ ಮತ್ತು ಕೆ.ಎಂ.ಮೀನಾಕುಮಾರಿ ಅವರು ಮಾತನಾಡಿದರು. ಪ್ರಮುಖರಾದ ಈಶ್ವರ್ ಭಟ್, ಕಾರ್ಯಪ್ಪ, ಸದಾಶಿವ, ಸಿಡಿಪಿಒ ಸವಿತಾ ಇತರರು ಇದ್ದರು. ಒಡಿಪಿ ಸಂಸ್ಥೆಯ ಪ್ರತಿನಿಧಿಗಳು ಪ್ರಾರ್ಥಿಸಿದರು. ವಕೀಲರು ಹಾಗೂ ಮಡಿಕೇರಿ ರೋಟರಿ ಅಧ್ಯಕ್ಷ ರತನ್ ತಮ್ಮಯ್ಯ ಸ್ವಾಗತಿಸಿದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿ, ವಂದಿಸಿದರು.