ಮಡಿಕೇರಿ, ಸೆ. 30: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ ಕಾಯ್ದೆಯ ಅನುಷ್ಠಾನ ಹಾಗೂ ತಂಬಾಕು ಉತ್ಪನ್ನಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರು ಮತ್ತು ಇಲಾಖೆ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು.

ಈ ತರಬೇತಿ ಕಾರ್ಯಾಗಾರ ವನ್ನು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಕಾರ್ಯ ಕ್ರಮಾಧಿಕಾರಿ ಡಾ. ಎಂ. ಶಿವಕುಮಾರ್ ಉದ್ಘಾಟಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ಜಿಲ್ಲಾ ಸಲಹೆಗಾರ್ತಿ ಪುನೀತ ರಾಣಿ ಪರಿಣಾಮಕಾರಿಯಾಗಿ ಕೋಟ್ಪಾ 2003 ಕಾಯ್ದೆ ಹಾಗೂ ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತಾಗಿ ಉಪನ್ಯಾಸ ನೀಡಿದರು. ಅತಿಥಿ ಗಳಾಗಿ ಎಂಟೋ ಮಾಲಜಿಸ್ಟ್ ಮಂಜುನಾಥ್ ಇದ್ದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತ ರಾದ ಮಂಜುನಾಥ್ ಅವರು ಸ್ವಾಗತಿಸಿ, ನಿರೂಪಿಸಿದರು. ವರ್ಷ ವಂದಿಸಿದರು.