ಮಡಿಕೇರಿ, ಅ. 1: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ ಹಾಗೂ ಸರ್ವೋದಯ ಸಮಿತಿ ಜಂಟಿ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆಯ ಸಭಾ ಕಾರ್ಯಕ್ರಮ ತಾ. 2 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ, ಸಂಸದರಾದ ಪ್ರತಾಪ್ ಸಿಂಹ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸರ್ವೋದಯ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್‍ಸಾಗರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ., ಜಿ.ಪಂ. ಸಿಇಓ ಕೆ. ಲಕ್ಷ್ಮೀಪ್ರಿಯಾ ಇತರರು ಪಾಲ್ಗೊಳ್ಳಲಿದ್ದಾರೆ.

ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಿಗ್ಗೆ 10 ಗಂಟೆಗೆ ನಗರದ ಗಾಂಧಿ ಮಂಟಪದ ಗಾಂಧಿ ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ ಕಾರ್ಯಕ್ರಮ ನಡೆಯಲಿದೆ.

ಮೂರ್ನಾಡು: ಮೂರ್ನಾಡು ಪದವಿ ಕಾಲೇಜಿನಲ್ಲಿ ರಾಷ್ಟ್ರಪಿತ ಗಾಂಧೀಜಿಯವರ 150ನೇ ಜನ್ಮೋತ್ಸವದ ಪ್ರಯುಕ್ತ ಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ತಾ. 3 ರಂದು ಮಧ್ಯಾಹ್ನ 1.30ಕ್ಕೆ ಜನ್ಮ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ.

ವಿಶ್ವಕ್ಕೆ ಶಾಂತಿಯ ಮಂತ್ರವನ್ನು ಹೇಳಿಕೊಟ್ಟ ಗಾಂಧೀಜಿಯವರ ಆದರ್ಶ ಜೀವನ ಹಾಗೂ ರಾಷ್ಟ್ರಕ್ಕೆ ಅವರ ಕೊಡುಗೆಗಳ ಬಗ್ಗೆ ಒಂದು ಕಿರುನೋಟವನ್ನು ಪ್ರಸ್ತುತ ಪಡಿಸಲಾಗುವದು. ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕಾಲೇಜಿನ ಪ್ರಾಂಶುಪಾಲ ಪಟ್ಟಡ ಪೂವಣ್ಣ ತಿಳಿಸಿದ್ದಾರೆ.