ಕುಶಾಲನಗರ, ಅ. 1: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗಿರಗೂರು ಅಮ್ಮ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಅಖಿಲ ಕರ್ನಾಟಕ ಜನಜಾಗೃತಿ ಸಮಿತಿ ಉಪಾಧ್ಯಕ್ಷರಾದ ಎಂ.ಎನ್.ಚಂದ್ರಮೋಹನ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಧನೆಗೆ ಪೂರಕವಾದ ಚಟುವಟಿಕೆಗಳಲ್ಲಿ ಮಹಿಳೆಯರು ತಮ್ಮನ್ನು ತೊಡಗಿಸಿಕೊಳ್ಳಬೇಕಿದೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಸೇವಾ ಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು.
ವಾರ್ಷಿಕೋತ್ಸವ ಅಂಗವಾಗಿ ಯೋಜನೆಯ ಸದಸ್ಯರಿಗೆ ರಂಗೋಲಿ ಬಿಡಿಸುವ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನ ವಿತರಣೆ ಮಾಡಿದರು. ಕೊಪ್ಪ ಗ್ರಾಪಂ ಉಪಾಧ್ಯಕ್ಷ ಯಶವಂತ್, ಒಕ್ಕೂಟದ ಅಧ್ಯಕ್ಷೆ ಮಲ್ಲಿಗೆ, ಸಮನ್ವಯ ಅಧಿಕಾರಿ ಶಾರದಾ, ಪ್ರಮುಖರಾದ ಗಂಗಮ್ಮ, ಸೇವಾ ಪ್ರತಿನಿಧಿಗಳಾದ ಲೀಲಾ, ರಾಧಾ, ಸುಲೋಚನಾ, ಅಮ್ಮ ಮತ್ತು ಹೇಮಾವತಿ ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರು ಇದ್ದರು.