ಕೂಡಿಗೆ, ಅ. 1: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದ ರಸ್ತೆ ಅಭಿವೃದ್ಧಿಗೆ ನೀರಾವರಿ ಇಲಾಖೆಯ ವತಿಯಿಂದ ರೂ. 20 ಲಕ್ಷ ಮಂಜೂರಾತಿ ಅಗಿರುವದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.
ಕೂಡಿಗೆಯಲ್ಲಿ ನಡೆದ ವಿವಿಧ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಪಾರೆಹಾಡಿಯ ರಸ್ತೆ ಕಾಂಕ್ರಿಟ್ ರಸ್ತೆಯನ್ನಾಗಿಸಲು 10ಲಕ್ಷ ರೂಗಳನ್ನು ನೀಡಲಾಗಿದೆ. ಈ ಕಾಮಗಾರಿಯ ಪ್ರಕ್ರಿಯೆ ಒಂದು ವಾರದ ನಂತರ ಪ್ರಾರಂಭಗೊಳ್ಳಲಿದೆ. ಗ್ರಾಮ ಪಂಚಾಯಿತಿ ಮಟ್ಟಕ್ಕೆ ರಸ್ತೆಯ ಅಭಿವೃದ್ಧಿಗೆ ಆಯಾ ಗ್ರಾ.ಪಂಗೆ. 10 ಲಕ್ಷ ರೂ. ಗಳನ್ನು ನೀಡಲಾಗುವದು. ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಉದ್ದೇಶದಿಂದ ಅಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೈಸಾರಿ ಜಾಗವನ್ನು ಗುರುತಿಸಿ ವಸತಿ ರಹಿತ ಫಲಾನುಭವಿಗಳಿಗೆ ನೀಡಲಾಗುವದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಅದ್ಯಕ್ಷೆ ಪ್ರೇಮಲೀಲಾ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಕುಮಾರ್, ತಾಲೂಕು ಬಿಜೆಪಿ ಉಪಾಧ್ಯಕ್ಷ ಕೆ.ಕೆ. ಭೋಗಪ್ಪ ಬಿಜೆಪಿ ಹಿಂದುಳಿದ ವರ್ಗದ ಅಧ್ಯಕ್ಷ ಕೆ.ವರದ, ಉದ್ಯಮಿ ಕಿಶೋರ್‍ಕುಮಾರ್, ಎಸ್.ಟಿ. ಘಟಕ ಅಧ್ಯಕ್ಷ ಪ್ರಭಾಕರ, ಎಸ್.ಸಿ. ಘಟಕ ಅಧ್ಯಕ್ಷ ಕುಮಾರಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರಾದ ಸಾವಿತ್ರಿ, ರಾಜ, ಕಲ್ಪನಾ, ಆರ್.ಎಂ.ಸಿ. ಮಾಜಿ ಅಧ್ಯಕ್ಷ ಎಂ.ಬಿ. ಜಯಂತ್, ಪಕ್ಷದ ಪ್ರಮುಖರಾದ ಮಣಿಕುಮಾರ, ಮಂಜುನಾಥ್, ಚಿಣ್ಣಪ್ಪ, ಶಶಿಕಿರಣ, ಕೇಶವ ರೈ, ಆರ್.ಕೆ. ಕೃಷ್ಣ, ಧನರಾಜ್, ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರುಗಳು, ಮಹಿಳಾ ಘಟಕ ಪದಾಧಿಕಾರಿಗಳು, ಶಕ್ತಿ ಕೇಂದ್ರ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಈ ಸಂದರ್ಭದಲ್ಲಿ ಗ್ರಾಮದ ಅಭಿವೃದ್ಧಿ ವಿಚಾರವಾಗಿ ಮನವಿ ಪತ್ರಗಳನ್ನು ಶಾಸಕರಿಗೆ ಸಲ್ಲಿಸಲಾಯಿತು.