ಮಡಿಕೇರಿ, ಅ. 2: 2018-19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಜಿಲ್ಲೆಯ ಮೂರು ಗ್ರಾಮ ಪಂಚಾಯಿತಿಗಳ ಆಡಳಿತ ಮಂಡಳಿಯವರು ಇಂದು ಪುರಸ್ಕಾರ ಸ್ವೀಕಾರ ಮಾಡಿದರು.
ಕೂಡುಮಂಗಳೂರು ಗ್ರಾ.ಪಂ. ಪರವಾಗಿ ಅಧ್ಯಕ್ಷೆ ಲಕ್ಷ್ಮಿ, ಅಭಿವೃದ್ಧಿ ಅಧಿಕಾರಿ ಆಯಿಷಾ, ಹೊಸೂರು ಗ್ರಾ.ಪಂ. ಪರವಾಗಿ ಅಧ್ಯಕ್ಷ ಕೊಲ್ಲಿರ ಗೋಪಿ ಚಿಣ್ಣಪ್ಪ, ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ಗೌಡ, ಗಾಳಿಬೀಡು ಗ್ರಾ.ಪಂ. ಪರವಾಗಿ ಅಧ್ಯಕ್ಷ ಸುಭಾಶ್ ಸೋಮಯ್ಯ, ಉಪಾಧ್ಯಕ್ಷೆ ರಾಣಿ ಮುತ್ತಣ್ಣ, ಕಾರ್ಯದರ್ಶಿ ದೀಪ್ತಿ ಅವರುಗಳು ಪುರಸ್ಕಾರ ಸ್ವೀಕಾರ ಮಾಡಿದರು.
ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಶಸ್ತಿಯೊಂದಿಗೆ ರೂ. 5 ಲಕ್ಷದ ಚೆಕ್ ನೀಡಿದರು. ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಕಂದಾಯ ಇಲಾಖಾ ಮುಖ್ಯ ಕಾರ್ಯದರ್ಶಿ ನಾಗಾಂಬಿಕೆ ದೇವಿ, ಕೊಡಗು ಜಿ.ಪಂ. ಉಪಕಾರ್ಯದರ್ಶಿ ಗುಡೂರು ಭೀಮಸೇನ ಇದ್ದರು.