ಕೂಡಿಗೆ, ಅ. 2: ಕೂಡಿಗೆ-ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಮತಕಟ್ಟೆಗೆ ಸೇರಿದಂತೆ ಬಿ.ಜೆ.ಪಿ. ಬೂತ್ ಸಮಿತಿ ರಚನೆಯನ್ನು ಮಾಡಲಾಯಿತು. ಕೂಡಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪಕ್ಷದ ಕಾರ್ಯಕರ್ತರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.
ಈ ಸಂದರ್ಭ ಬೂತ್ ಮಟ್ಟದ ಅಧ್ಯಕ್ಷ, ಕಾರ್ಯದರ್ಶಿಗಳ ನೇಮಕ ಮಾಡುವ ಮೂಲಕ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ತಾಲೂಕು ಬಿ.ಜೆ.ಪಿ. ಉಪಾಧ್ಯಕ್ಷ ಕೆ.ಕೆ. ಬೋಗಪ್ಪ, ಹಿಂದುಳಿದ ವರ್ಗ ಘಟಕ ಅಧ್ಯಕ್ಷ ಕೆ. ವರದ, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜಯ್ಯ, ಜಯಶ್ರೀ, ಶಕ್ತಿ ಕೇಂದ್ರದ ಕಾರ್ಯದರ್ಶಿ ಮಣಿ ಸ್ಥಾನೀಯ ಸಮಿತಿ ಉಪಾಧ್ಯಕ್ಷ ಚುಮ್ಮಿ, ಯುವ ಮೋರ್ಚಾದ ಚಿಣ್ಣಪ್ಪ, ಕೇಶವ ರೈ, ಆರ್.ಕೆ. ಕೃಷ್ಣ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಘಟಕಗಳ ಅಧ್ಯಕ್ಷರು, ವಿವಿಧ ಮಹಿಳಾ ಘಟಕಗಳ ಅಧ್ಯಕ್ಷರು ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.