ಮಡಿಕೇರಿ, ಅ. 2: 2019-20ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ಅಂತರ್ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢ ಶಾಲೆ ಮಕ್ಕಂದೂರಿನ 10ನೇ ತರಗತಿ ವಿದ್ಯಾರ್ಥಿನಿ ಎಂ.ಜಿ. ಚೈತ್ರ 3000 ಮೀಟರ್ ಓಟದಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ದೈಹಿಕ ಶಿಕ್ಷಕ ರಾಘವೇಂದ್ರ ಶೆಟ್ಟಿ ತರಬೇತಿ ನೀಡಿದ್ದಾರೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.