ಮಡಿಕೇರಿ, ಅ. 2:-ಪ್ರಸಕ್ತ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಐಸಿಐಸಿಐ ಅಕಾಡೆಮಿ ಪಾರ್ ಸ್ಕಿಲ್ಸ್, ಐಸಿಐಸಿಐ ಫೌಂಡೇಶನ್ ಇವರ ಸಹಯೋಗದೊಂದಿಗೆ ಆಫೀಸ್ ಅಡ್ಮಿನಿಸ್ಟ್ರೇಷನ್ ಮತ್ತು ರಿಟೈಲ್ಸ್ ಸೇಲ್ಸ್ ಕೋರ್ಸ್‍ಗಳ ತರಬೇತಿ ಪಡೆಯಲು ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ ಎಸ್‍ಎಸ್‍ಎಲ್‍ಸಿ ಪಾಸಾದ ಹಾಗೂ ಪಿಯುಸಿ ಹಾಗೂ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ 18 ರಿಂದ 30 ವರ್ಷದೊಳಗಿರುವ ನಿರುದ್ಯೋಗಿ ವಿದ್ಯಾವಂತ ಯುವಕ ಹಾಗೂ ಯುವತಿಯರಿಗೆ ಐಸಿಐಸಿಐ ಅಕಾಡೆಮಿ ಪಾರ್ ಸ್ಕಿಲ್ಸ್, ಐಸಿಐಸಿಐ ಫೌಂಡೇಶನ್ ಇವರ ವತಿಯಿಂದ ಆಫೀಸ್ ಅಡ್ಮಿನಿಸ್ಟ್ರೇಷನ್ ಮತ್ತು ರಿಟೈಲ್ಸ್ ಸೇಲ್ಸ್ ಕೋರ್ಸ್‍ಗಳನ್ನು ಮೈಸೂರು ಅಥವಾ ಬೆಂಗಳೂರು ಕೇಂದ್ರಗಳಲ್ಲಿ ತರಬೇತಿ ನೀಡಲಾಗುವದು.

ತರಬೇತಿಯ ಅವಧಿಯು 3 ತಿಂಗಳ ಅವಧಿಯಾಗಿದ್ದು, ತರಬೇತಿಯು ಸಂಪೂರ್ಣ ಉಚಿತವಾಗಿದೆ. ತರಬೇತಿ ಅವಧಿಯಲ್ಲಿ ನಿಗಮದ ವತಿಯಿಂದ ಸ್ಥಳೀಯವಾಗಿ ಹಾಜರಾಗುವ ಅಭ್ಯರ್ಥಿಗಳಿಗೆ ಪ್ರತಿ ಮಾಹೆ ರೂ. 1,200 ಗಳ ಪ್ರಯಾಣ ವೆಚ್ಚ ಅಥವಾ ಬೇರೆ ಜಿಲ್ಲೆಗಳಿಂದ ತರಬೇತಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪ್ರತಿ ಮಾಹೆ ರೂ. 5 ಸಾವಿರಗಳ ವಸತಿ ವೆಚ್ಚವಾಗಿ ಅಭ್ಯರ್ಥಿಗಳ ಖಾತೆಗೆ ನೇರವಾಗಿ ಪಾವತಿಸಲಾಗುವದು.

ತರಬೇತಿ ಪಡೆಯಲು ಆಸಕ್ತಿಯುಳ್ಳ ಅಭ್ಯರ್ಥಿಗಳು ನಗರದ ಜಿಲ್ಲಾ ವ್ಯವಸ್ಥಾಪಕರು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಉಚಿತವಾಗಿ ಅರ್ಜಿ ಪಡೆದು ಅರ್ಜಿಯೊಂದಿಗೆ ಫೋಟೋ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, 10ನೇ ತರಗತಿ ಪಾಸಾಗಿರುವ ಅಂಕಪಟ್ಟಿ (ಕಡ್ಡಾಯ), ಪಿಯುಸಿ ಅಥವಾ ಪದವಿಯ ಅಂಕಪಟ್ಟಿ ಹಾಗೂ ಬ್ಯಾಂಕ್ ಖಾತೆ ಹೊಂದಿರುವ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಗಳ ದಾಖಲಾತಿಗಳನ್ನು ದ್ವಿ ಪತ್ರಿಯಲ್ಲಿ ಜಿಲ್ಲಾ ಕಚೇರಿಗೆ ತಾ. 23 ರೊಳಗೆ ಸಲ್ಲಿಸಲು ತಿಳಿಸಿದೆ.

ತರಬೇತಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಐಸಿಐಸಿಐ ಅಕಾಡೆಮಿ ಫಾರ್ ಸ್ಕಿಲ್, ಮೈತ್ರಿ ಸೆಂಟರ್, ವೆಸ್ಟ್‍ವಿಂಗ್, ಹೊಸೂರು ರಸ್ತೆ, ಅಕ್ಸ್‍ಫರ್ಡ್ ಇಂಜಿನಿಯರಿಂಗ್ ಕಾಲೇಜು ಪಕ್ಕ, ದೊಮ್ಮನಹಳ್ಳಿ, ಬೆಂಗಳೂರು-560 068 ಶ್ರೀ ಮಧು, ದೂರವಾಣಿ ಸಂಖ್ಯೆ 9611075559 ಇವರನ್ನು ಅಥವಾ ಜಿಲ್ಲಾ ವ್ಯವಸ್ಥಾಪಕರು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಡಿಕೇರಿ, ಕೊಡಗು ಜಿಲ್ಲೆ ದೂರವಾಣಿ ಸಂಖ್ಯೆ 08272-228857 ನ್ನು ಸಂಪರ್ಕಿಸಬಹುದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಪೊಲೀಸ್ ಹುದ್ದೆಗೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ರಾಜ್ಯದಲ್ಲಿ ಖಾಲಿಯಿರುವ ಪೊಲೀಸ್ ಕಾನ್ಸ್‍ಟೇಬಲ್ (ನಾಗರಿಕ) (ಪುರುಷ-ಮಹಿಳಾ) ಹಾಗೂ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ) (ಸಿಎಆರ್-ಡಿಎಆರ್) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆನ್‍ಲೈನಲ್ಲಿ ಅರ್ಜಿ ಸಲ್ಲಿಸಬೇಕು. ಪೊಲೀಸ್ ಕಾನ್ಸ್‍ಟೇಬಲ್ (ನಾಗರಿಕ) (ಪುರುಷ-ಮಹಿಳಾ) ಒಟ್ಟು ಹುದ್ದೆಗಳು 2013 (ಪುರುಷ-1604 ಹಾಗೂ ಮಹಿಳೆ-409), ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

2019ರ ತಾ. 17 ಕ್ಕೆ ಅನ್ವಯವಾಗುವಂತೆ ಕನಿಷ್ಟ 19 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 27 ವರ್ಷಗಳು ಮತ್ತು ಕರ್ನಾಟಕ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.

ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ ) (ಸಿಎಆರ್-ಡಿಎಆರ್) ಒಟ್ಟು ಹುದ್ದೆಗಳು 1013, ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 27 ವರ್ಷಗಳು ಮತ್ತು ಕರ್ನಾಟಕ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.

ನೇಮಕಾತಿಯು ಸಾಮಾನ್ಯ ಲಿಖಿತ ಪರೀಕ್ಷೆ, ದೇಹದಾಢ್ರ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ಒಳಗೊಂಡಿದೆ. ಅರ್ಜಿ ಸಲ್ಲಿಸಲು ತಾ. 17 ಕೊನೆಯ ದಿನವಾಗಿದೆ. ಶುಲ್ಕ ಪಾವತಿಸಲು ತಾ. 19 ಕೊನೆಯ ದಿನ. ಸಾಮಾನ್ಯ ವರ್ಗ, ಪ್ರವರ್ಗ-2, 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 250, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 100 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ತಿತಿತಿ.ಞsಠಿ.gov.iಟಿ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಯಾಂತ್ರಿಕೃತ ಹೊಲಿಗೆ ತರಬೇತಿಗೆ

ಪ್ರಸಕ್ತ ಸಾಲಿನಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯಿತಿ ಇವರ ವತಿಯಿಂದ ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರು ತರಬೇತಿಯನ್ನು ಪಡೆದು ಜವಳಿ ಕ್ಷೇತ್ರದಲ್ಲಿ ಹಾಗೂ ಕೈಮಗ್ಗ-ವಿದ್ಯುತ್ ಮಗ್ಗ ಕ್ಷೇತ್ರದಲ್ಲಿ ವೃತ್ತಿ ಆರಂಭಿಸಿ ಜೀವನ ಮಟ್ಟ ಸುಧಾರಿಸಿಕೊಳ್ಳುವ ಸಲುವಾಗಿ ಜಿಲ್ಲಾದ್ಯಂತ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, “ಸೀವಿಂಗ್ ಮಷಿನ್ ಆಪರೇಟರ್” (ಯಾಂತ್ರಿಕೃತ ಹೊಲಿಗೆ ತರಬೇತಿ) ಹಾಗೂ ಕೈಮಗ್ಗ-ವಿದ್ಯುತ್ ಮಗ್ಗ ತರಬೇತಿಯನ್ನು ಅನುಷ್ಠಾನಗೊಳಿಸಲು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ 2019-20ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ದಾಖಲಾತಿಗಳನ್ನು ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆಗೆ ಸಲ್ಲಿಸುವದು. ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ದ್ವಿಪ್ರತಿಯಲ್ಲಿ ಸಲ್ಲಿಸತಕ್ಕದ್ದು. ಸೀವಿಂಗ್ ಮಷಿನ್ ಆಪರೇಟರ್ (ಎಸ್.ಎಂ.ಒ) ಮತ್ತು ಕೈಮಗ್ಗ ತರಬೇತಿಯು 45 ದಿನಗಳ ಅವಧಿಯಾಗಿರುತ್ತದೆ.

ತರಬೇತಿ ಪಡೆಯಲು ಅಭ್ಯರ್ಥಿಯು ಕನಿಷ್ಟ 5ನೇ ತರಗತಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಅಭ್ಯರ್ಥಿಯ ವಯಸ್ಸು 18 ರಿಂದ 35 ವರ್ಷದ ಒಳಪಟ್ಟಿದ್ದು ಸೂಕ್ತ ದಾಖಲೆ ಒದಗಿಸಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇರುತ್ತದೆ. ಅಭ್ಯರ್ಥಿಗಳು ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ ನೀಡಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಪೂರ್ಣವಾದ ನಂತರ ತರಬೇತಿ ಅವಧಿಯಲ್ಲಿ ಶೇ. 80 ರಷ್ಟು ಹಾಜರಾತಿಯಾದರೆ ಮಾತ್ರ ಶಿಷ್ಯವೇತನ ರೂ.3500 ಹಾಗೂ ತರಬೇತಿ ಪ್ರಮಾಣ ಪತ್ರ ನೀಡಲಾಗುವದು.

ತರಬೇತಿ ಪಡೆದ ಅಭ್ಯರ್ಥಿಗಳಿಗೆ ಶೇ. 100 ರಷ್ಟು ಸಿದ್ಧ ಉಡುಪು ತಯಾರಿಕಾ ಘಟಕ-ಕೈಮಗ್ಗ ಉತ್ಪನ್ನ ಘಟಕಗಳಲ್ಲಿ ಉದ್ಯೋಗ ಕಲ್ಪಿಸಿಕೊಡಲಾಗುವದು. ಅರ್ಜಿಗಳನ್ನು ಕಚೇರಿ ವೇಳೆಯಲ್ಲಿ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ, ಕೊಹಿನೂರ್ ರಸ್ತೆ, ಮಡಿಕೇರಿ, ದೂರವಾಣಿ ಸಂಖ್ಯೆ: 08272-220365 ರವರ ಕಚೇರಿಯಲ್ಲಿ ಅಥವಾ ತರಬೇತಿ ಸಂಸ್ಥೆಗಳಲ್ಲಿ ಪಡೆಯಬಹುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕರಾದ ಗುರುಸ್ವಾಮಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ-08272-225531. ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ, ಕೊಹಿನೂರ್ ರಸ್ತೆ, ಮಡಿಕೇರಿ-08272-220365, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದಾಗಿದೆ.