ಮಡಿಕೇರಿ, ಅ. 2: ಕರ್ನಾಟಕ ಜಾನಪದ ಪರಿಷತ್ತು, ಕೊಡಗು ಜಿಲ್ಲಾ ಘಟಕ ಮತ್ತು ಮಡಿಕೇರಿ ನಗರ ದಸರಾ ಸಮಿತಿ ಇವರ ವತಿಯಿಂದ ಕೊಡಗು ಜಾನಪದ ಉತ್ಸವವು ತಾ. 3 ರಂದು (ಇಂದು) ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ತಾ. 3 ರಂದು ಬೆಳಗ್ಗೆ 9.30 ಗಂಟೆಗೆ ಮಡಿಕೇರಿ ಜಿ.ಟಿ. ವೃತ್ತದಿಂದ ಕಲಾಜಾಥಾ ನಡೆಯಲಿದೆ. ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಸಂಸದ ಪ್ರತಾಪ್ ಸಿಂಹ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಒ ಕೆ.ಲಕ್ಷ್ಮೀಪ್ರಿಯಾ, ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷ ರಾಬಿನ್ ದೇವಯ್ಯ, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಟಿ. ತಿಮ್ಮೇಗೌಡ, ಖ್ಯಾತ ವಾಗ್ಮಿ ಕೃಷ್ಣ ಉಪಾಧ್ಯಾಯ, ಸಂಗೀತ ಕ್ಷೇತ್ರದ ಸಾಧಕ ಚಕ್ಕೇರ ತ್ಯಾಗರಾಜ್, ಕನ್ನಡ ಭಾಷಾ ಸಾಧಕ ಬಿ.ಎಸ್. ಲೋಕೇಶ್ ಸಾಗರ್, ಸಾಹಿತ್ಯ ಸೇವೆ ವೈಲೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಇತರರು ಪಾಲ್ಗೊಳ್ಳಲಿದ್ದಾರೆ.

ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷರಾದ ಟಿ. ತಿಮ್ಮೇಗೌಡ ಅವರು ಅಧ್ಯಕ್ಷತೆ ವಹಿಸಲಿ ದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರು ಹಾಗೂ ರಂಗಭೂಮಿ ಕಲಾವಿದ ಅಡ್ಡಂಡ ಕಾರ್ಯಪ್ಪ, ಇತರರು ಪಾಲ್ಗೊಳಲ್ಲಿದ್ದಾರೆ.